ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಂಘದ ತಾಲೂಕು ಘಟಕದ ಅಧ್ಯಕ್ಷ ಅಯ್ಯಪ್ಪ ನಾಯಕ ತಿಳಿಸಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದಿಂದ ರಾಜ್ಯಾದ್ಯಂತ ಆಗಸ್ಟ್ 23 ಮತ್ತು 24 ರಂದು ತರಗತಿ ಬಹಿಷ್ಕರಿಸಿ ಹೋರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಘಟಕದ ಅಧ್ಯಕ್ಷರು ತಿಳಸಿದ್ದಾರೆ.
ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಸುಮಾರು 35 ಸಾವಿರ ಶಿಕ್ಷಕರು ಕಳೆದ 12 ವರ್ಷಗಳಿಂದ ಕಡಿಮೆ ವೇತನ, ಸೇವಾ ಭದ್ರತೆ ಕೃಪಾಂಕವು ಸೇರಿದಂತೆ ಯಾವುದೇ ರೀತಿಯ ಸೌಲಭ್ಯಗಳಿಲ್ಲದೆ ಪ್ರಾಮಾಣಿಕತೆಯಿಂದ ಶೈಕ್ಷಣಿಕ ಬದುಕನ್ನು ಕಟ್ಟಿಕೊಡುವ ಕಾರ್ಯದಲ್ಲಿ ನಿರತರಾಗಿದ್ದೇವೆ . ಈ ಹಿಂದೆ ಹಲವಾರು ಬಾರಿ ಹೋರಾಟ ನಡೆಸಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ರಾಜ್ಯ ಶಿಕ್ಷಣ ಸಚಿವರಾದ ಮದು ಬಂಗಾರಪ್ಪರವರು ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದರು, ಆದರೆ ಇದುವರೆಗೂ ಕ್ರಮ ಜರುಗಿಸಿಲ್ಲ ಎಂದು ದೂರಿದರು.
Eye Donate: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ದಾನ: ದುಃಖದ ನಡುವೆ ಕುಟುಂಬಸ್ಥರ ಮಾನವೀಯತೆ..!
Dr. BR Ambedkar: ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ ನಿಮಿತ್ತ ಊರಿನಲ್ಲಿ ಹಬ್ಬದ ವಾತಾವರಣ :
Aadhar card : ನಾಯಕನಹಟ್ಟಿ ನಾಡಕಚೇರಿ ಆಧಾರ್ ನೊಂದಣಿಗೆ ಮುಗಿಬಿದ್ದ ಜನತೆ…