ಜುಲೈ 3ನೇ ವಾರದಲ್ಲಿ SSLC ಪರೀಕ್ಷೆ- ಮಾರ್ಗಸೂಚಿ ಬಿಡುಗಡೆ

www.karnatakatv.net: ರಾಜ್ಯ- ಬೆಂಗಳೂರು: ಕೊರೊನಾ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆ, ಜುಲೈ 3ನೇ ವಾರದಲ್ಲಿ SSLC ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕುರಿತು (ಪ್ರಾಮಾಣಿತ ಕಾರ್ಯಾಚರಣೆ ವಿಧಾನ) ಎಸ್ ಒಪಿ ಬಿಡುಗಡೆ ಮಾಡಲಾಗಿದ್ದು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಇನ್ನು, ರಾಜ್ಯ ಕೊವಿಡ್ ತಾಂತ್ರಿಕ ಸಲಹಾ ಸಮಿತಿ ರೂಪಿಸಿ ನೀಡಿದ ಎಸ್ ಒಪಿಯನ್ನ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ರವಾನಿಸಲಾಗಿದೆ ಎಂದರು. ಮುಖ್ಯವಾಗಿ, ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗಲಿರುವ ಶಿಕ್ಷಕರು, ಸಿಬ್ಬಂದಿ ಮತ್ತು ಅಧಿಕಾರಿಗಳು ಜಿಲ್ಲಾಡಳಿತದ ಸಹಕಾರದಿಂದ ಕೋವಿಡ್ ಲಸಿಕೆ ಪಡೆಯಬೇಕೆಂದು ಪ್ರಕಟಣೆಯಲ್ಲಿ ಸೂಚಿಸಲಾಗಿದೆ.

About The Author