ಬೆಂಗಳೂರು: ದೇವದತ್ ಪಡಿಕಲ್ ಅವರ ಅರ್ಧ ಶತಕ ಹಾಗೂ ನಾಯಕನ ಆಟವಾಡಿದ ಮನೀಶ್ ಪಾಂಡೆ ಭರ್ಜರಿ ಬ್ಯಾಟಿಂಗ್ ನೆರೆವಿನಿಂದ ಗುಲ್ಬರ್ಗಾ ಮಿಸ್ಟಿಕ್ಸ್ ಚೊಚ್ಚಲ ಆವೃತ್ತಿಯ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಶುಕ್ರವಾರ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಬೆಂಗಳೂರು ಬ್ಲಾಸ್ಟರ್ಸ್ ಫೀಲ್ಡಿಂಗ್ ಆಯ್ದುಕೊಂಡಿತು.
ಮೊದಲು ಬ್ಯಾಟಿಂಗ್ ಮಾಡಿದ ಗುಲ್ಬರ್ಗಾ ಮಿಸ್ಟಿಕ್ಸ್ ನಿಗದಿತ 20 ಓವರ್‍ಗಳಲ್ಲಿ 3 ವಿಕೆಟ್ ನಷ್ಟಕ್ಕೆ 220 ರನ್ ಗಳಿಸಿತು. ಬೆಂಗಳೂರು ಬ್ಲಾಸ್ಟರ್ಸ್ ನಿಗದಿತ 20 ಓವರ್‍ಗಳಲ್ಲಿ 9 ವಿಕೆಟ್ ನಷ್ಟಕ್ಕೆ 209 ರನ್ ಗಳಿಸಿತು.
ಗುಲ್ಬರ್ಗಾ ಪರ ಜೆಸ್ವಂತ್ 39, ರೋಹನ್ ಪಾಟೀಲ್ 38, ದೇವದತ್ ಪಾಟೀಲ್ ಅಜೇಯ 56, ಕೃಷ್ಣನ್ ಶ್ರೀಜಿತ್ 38, ಮನೀಶ್ ಪಾಂಡೆ 17 ಎಸೆತದಲ್ಲಿ 2 ಬೌಂಡರಿ 4 ಸಿಕ್ಸರ್ ಸಿಡಿಸಿದರು.
221 ರನ್‍ಗಳ ಬೃಹತ್ ಮೊತ್ತ ಬೆನ್ನತ್ತಿದ ಬೆಂಗಳೂರು ಬ್ಲಾಸ್ಟರ್ಸ್ ಪರ ಚೇತನ್ 91, ಕ್ರಾಂತಿ ಕುಮಾರ್ 47, ರೋನಿತ್ ಮೋರೆ ಅಜೇಯ 22 ರನ್ ಗಳಿಸಿದರು. ಅಂತಿಮವಾಗಿ ಬೆಂಗಳೂರು ತಂಡ 11 ರನ್‍ಗಳ ಹಿನ್ನಡೆ ಅನುಭವಿಸಿ ಸೋಲು ಕಂಡಿತು. ಮನೋಜ್ ಭಂಡಾಜೆ 32ಕ್ಕೆ 3 ವಿಕೆಟ್ ಪಡೆದರು.
ನಾಯಕ ಮನೀಶ್ ಪಾಂಡೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಹಾಗೂ ರೋಹನ್ ಪಾಟೀಲ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.