National News: ಮಂಗಳೂರು: ಜಮ್ಮು ಕಾಶ್ಮೀರದ ರಜೌರಿಯಲ್ಲಿ (Rajouri) ನಡೆದ ಗುಂಡಿನ ಚಕಮಕಿಯಲ್ಲಿ ಕನ್ನಡಿಗ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸಹಿತ ನಾಲ್ವರು ಯೋಧರು (Soldiers) ಹುತಾತ್ಮರಾಗಿದ್ದರೆ. 28ರ ಹರೆಯದ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ 63 ರಾಷ್ಟ್ರೀಯ ರೈಫಲ್ಸ್ ನ ಕ್ಯಾಪ್ಟನ್ ಆಗಿದ್ದರು. ಮಂಗಳೂರಿನಲ್ಲಿ ಎಂಆರ್ ಪಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ.ವೆಂಕಟೇಶ್-ಅನುರಾಧಾ ದಂಪತಿಯ ಏಕೈಕ ಪುತ್ರ. ಮಂಗಳೂರಿನಲ್ಲೇ ಹುಟ್ಟಿ ಬೆಳೆದ ಪ್ರಾಂಜಲ್. ಎಂಆರ್ಪಿಎಲ್ ಡೆಲ್ಲಿ ಸ್ಕೂಲ್ ನಲ್ಲಿ ಹತ್ತನೇ ತರಗತಿವರೆಗೆ ವಿಧ್ಯಾಭ್ಯಾಸ ಮಾಡಿದ್ದರು. ನಂತರ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ರು. ಬಳಿಕ ಮಧ್ಯಪ್ರದೇಶದ ಮಿಲಿಟರಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಶಿಕ್ಷಣ ಪಡೆದುಕೊಂಡಿದ್ದರು.
ಎರಡು ವರ್ಷಗಳ ಹಿಂದೆಯಷ್ಟೇಪ ಪ್ರಾಂಜಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಪ್ರಾಂಜಲ್ ಓದಿದ್ದ ಎಂಆರ್ಪಿಎಲ್ ಡೆಲ್ಲಿ ಶಾಲೆಗೆ ಇಂದು ರಜೆ ಘೋಷಿಸಲಾಗಿದೆ.
ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ನಾಲ್ವರು ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗಿರಲಿಲ್ಲ.
ವಿಶೇಷ ಪಡೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ
ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿದ್ದಾರೆ ಎಂಬ ಗುಪ್ತಚರ ಮೂಲಗಳ ಖಚಿತ ಮಾಹಿತಿ ಮೇರೆಗೆ ಸೇನೆಯ ವಿಶೇಷ ಪಡೆಗಳು ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದರು. ಬುಧವಾರ ಬೆಳಗ್ಗೆ ಅಲ್ಲಿಗೆ ಆಗಮಿಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಬಂದೂಕುಧಾರಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದ ಎಚ್ಚೆತ್ತ ಸೇನೆ ಪ್ರತಿದಾಳಿ ನಡೆಸುವ ಮೂಲಕ ಎನ್‌ಕೌಂಟರ್ ಕಾರಣವಾಯಿತು.
ಉಗ್ರರ ಅಡಗುತಾಣವಾದ ಅರಣ್ಯ
ಕಾಶ್ಮೀರದ ಪಿರ್ ಪಂಜಾಲ್ ಅರಣ್ಯ ಪ್ರದೇಶವು ಕಳೆದ ಕೆಲವು ವರ್ಷಗಳಿಂದ ಸರಣಿ ಎನ್‌ಕೌಂಟರ್ಗಳಿಗೆ ಸಾಕ್ಷಿಯಾಗಿದೆ. ದಟ್ಟವಾದ ಕಾಡುಗಳನ್ನು ಭಯೋತ್ಪಾದಕರು ತಮ್ಮ ನೆಲೆಯನ್ನಾಗಿ ಬಳಸಿಕೊಳ್ಳುತ್ತಿದ್ದು, ಅವರನ್ನ ಸದೆಬಡಿಯುವುದು ಭದ್ರತಾ ಪಡೆಗಳಿಗೆ ದೊಡ್ಡ ಸವಾಲ್ ಅಗಿ ಪರಿಣಮಿಸಿದೆ.
ಅಪಾಯಕಾರಿ ಪರ್ವತಗಳು, ದಟ್ಟವಾದ ಕಾಡುಗಳು ಮತ್ತು ಆಲ್ಪೈನ್ ಕಾಡುಗಳನ್ನು ಭಯೋತ್ಪಾದಕರು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದ್ದಾರೆ. ಕಳೆದ ವಾರ ರಜೌರಿ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಕೊಂದಿದ್ದರು.
ಪೊಲೀಸ್ ಕಿರುಕುಳಕ್ಕೆ ಯುವಕ ಆತ್ಮಹತ್ಯೆ: ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು!