Tuesday, September 16, 2025

Latest Posts

ಶಾಸಕ ಅಬ್ಬಯ್ಯಗೆ ಚಾಲೆಂಜ್ ಮಾಡಿದ ಗುಂಟ್ರಾಳ..!

- Advertisement -

www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಕೊಳೆಗೇರಿ ಕುಟುಂಬಗಳಿಗೆ ಬಿಜೆಪಿ ಸರ್ಕಾರ ಹಕ್ಕುಪತ್ರ ನೀಡುತ್ತಿದೆ. ಆದರೆ ಶಾಸಕ ಪ್ರಸಾದ ಅಬ್ಬಯ್ಯ ನಾನೇ ಮಾಡಿದ್ದು ಎಂದು ಸುಳ್ಳು ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ‌ ಎಂದು ಸ್ಲಂ ಜನಾಂದೋಲನ ರಾಜ್ಯ ಸಂಚಾಲಕ ವಿಜಯ ಗುಂಟ್ರಾಳ ಆರೋಪಿಸಿದ್ದಾರೆ.

ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಜ್ಯದ 3.12 ಲಕ್ಷ ಕೊಳೆಗೇರಿ ಕುಟುಂಬಗಳಿಗೆ ರಾಜ್ಯ ಸರ್ಕಾರ ಹಕ್ಕು ಪತ್ರ ನೀಡುತ್ತಿದೆ. ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದಲ್ಲಿ 32 ಸ್ಲಂ ಗಳಿವೆ 6500 ಜನರಿಗೆ ಹಕ್ಕು ಪತ್ರ ವಿತರಿಸಲಾಗುತ್ತಿದೆ. ಅಲ್ಲದೇ ಬಿಜೆಪಿ ಸರ್ಕಾರ ಹಕ್ಕು ಪತ್ರ ಕೊಡುತ್ತಿದೆ. ಆದರೆ ಇದನ್ನು ಶಾಸಕ ಪ್ರಸಾದ್ ಅಬ್ಬಯ್ಯ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ತಿದಾರೆ ಎಂದು ಕಿಡಿ ಕಾರಿದರು.

ತಾವೇ ಸ್ಲಂ ನಿವಾಸಿಗಳಿಗೆ ಹಕ್ಕು ಪತ್ರ ಕೊಡಿಸುತ್ತಿರೋದಾಗಿ ಹೇಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಅಬ್ಬಯ್ಯ ಏನೂ ಮಾಡಲೇ ಇಲ್ಲ, ನಮ್ಮ ಹೋರಾಟದ ಫಲವಾಗಿ ಹಕ್ಕು ಪತ್ರ ವಿತರಿಸಲಾಗುತ್ತಿದೆ. ಆದರೆ ತಾನೇ ಕೊಡಿಸಿರೋದಾಗಿ ಅಹಂಕಾರದಿಂದ ಹೇಳುತ್ತಿದ್ದಾರೆ.‌ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ವರ್ತಿಸಿದಾರೆ. ನಿಜವಾಗಿಯೂ ಕೆಲಸ ಮಾಡಿದ್ದರೆ ದಾಖಲೆ ಬಿಡುಗಡೆ ಮಾಡಲಿ. ಇಲ್ಲವೆ ಬಹಿರಂಗ ಚರ್ಚೆಗೆ ಬರುವಂತೆ ಆಗ್ರಹಿಸಿದರು.

ಕರ್ನಾಟಕ ಟಿವಿ – ಹುಬ್ಬಳ್ಳಿ

- Advertisement -

Latest Posts

Don't Miss