Saturday, January 18, 2025

Latest Posts

ಹೆಚ್.ಡಿ.ಕುಮಾರಸ್ವಾಮಿ ಕಣ್ಣೀರು ಹಾಕಿದ್ದೇ ಹಾಕಿದ್ದು, ಈಗ ಹಾಸನ ಜನತೆ ಕಣ್ಣೀರು ಹಾಕ್ತವ್ರೆ: ಸಿಎಂ ವ್ಯಂಗ್ಯ

- Advertisement -

Hassan News: ಇಂದು ಹಾಸನದಲ್ಲಿ ಕಾಂಗ್ರೆಸ್ ಜನಕಲ್ಯಾಣ ಸಮಾವೇಶ ನಡೆದಿದ್ದು, ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರದಲ್ಲಿ ಮಂತ್ರಿಯಾಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ಮೇಕೆದಾಟು ವಿಚಾರದಲ್ಲಿ ಮೌನ ಆಗಿರುವುದು ಏಕೆ? ಬೆಂಗಳೂರಿನ ಜನತೆಗೆ ನೀರು ಬೇಕಾಗಿದೆ, ಈಗ ಕೊಡಿಸಲಿ. ಮಾಜಿ ಪ್ರಧಾನಿ ದೇವೇಗೌಡರು ನನಗಿಂತ 15 ವರ್ಷ ಹಿರಿಯರು. ಅವರು ಅಷ್ಟೆ ಘನತೆಯಿಂದ ಮಾತಾಡಬೇಕಿತ್ತು. ಯಾವತ್ತೂ ಗರ್ವ ತೋರಿಸದ ನನಗೆ, “ಸಿದ್ದರಾಮಯ್ಯ ಅವರ ಗರ್ವಭಂಗ ಮಾಡ್ತೀನಿ” ಎಂದರು. ಇದನ್ನು ನೀವು ಒಪ್ಪಿಕೊಳ್ಳುತ್ತೀರಾ? ಸಹಿಸುತ್ತೀರಾ? ಎಂದು ಪ್ರಶ್ನಿಸಿದ್ದಾರೆ.

ಹಾಸನದ ಹೆಣ್ಣು ಮಕ್ಕಳು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಕೇಂದ್ರ ಸರ್ಕಾರ ರಾಜ್ಯದ ರೈತರ ಪಾಲಿನ ಸಬಾರ್ಡ್ ಸಾಲದಲ್ಲಿ ಶೇ.58 ರಷ್ಟನ್ನು ಕಡಿತಗೊಳಿಸಿದೆ. ಇದರಿಂದ ಹಾಸನದ ರೈತರು ಮತ್ತು ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಮಗ ಎಂದುಕೊಂಡಿರುವ ಕುಮಾರಸ್ವಾಮಿಯವರು ಏಕೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಿಲ್ಲ? ನಬಾರ್ಡ್ ನಿಂದ ಆಗಿರುವ ಅನ್ಯಾಯವನ್ನು ಕುಮಾರಸ್ವಾಮಿ ಅವರು ಏಕೆ ಸರಿಪಡಿಸುತ್ತಿಲ್ಲ? ಕಳೆದ ಹಣಕಾಸು ವರ್ಷದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ನಷ್ಟ ಆಗಿರುವ 11 ಸಾವಿರ ಕೋಟಿ ರೂಪಾಯಿಯನ್ನು ರಾಜ್ಯಕ್ಕೆ ಕೊಡಿಸಲು ಬಿಜೆಪಿ-ಜೆಡಿಎಸ್ ಏಕೆ ಬಾಯಿ ಬಿಡುತ್ತಿಲ್ಲ? ರಾಜ್ಯಕ್ಕೆ, ರಾಜ್ಯದ ಜನರಿಗೆ ಆಗುತ್ತಿರುವ ಅನ್ಯಾಯ ಕುಮಾರಸ್ವಾಮಿ ಮತ್ತು ಬಿಜೆಪಿ ಸಂಸದರು ತಾಕತ್ತಿದ್ದರೆ ಸರಿಪಡಿಸಲಿ ಎಂದು ಸಿಎಂ ಸವಾಲ್ ಹಾಕಿದ್ದಾರೆ.

ದೇವೇಗೌಡರು ರಾಜಕೀಯವಾಗಿ ಒಕ್ಕಲಿಗ ನಾಯಕರನ್ನು ನಿರಂತರವಾಗಿ ಮುಗಿಸುತ್ತಿದ್ದಾರೆ. ಬಚ್ಚೇಗೌಡರು, ವೈ.ಕೆ.ರಾಮಯ್ಯ, ಬೈರೇಗೌಡರು, ಕೃಷ್ಣಪ್ಪ, ಚಲುವರಾಯಸ್ವಾಮಿ ಸೇರಿ ಎಷ್ಟು ಮಂದಿ ಒಕ್ಕಲಿಗ ನಾಯಕರನ್ನು ದೇವೇಗೌಡರು ರಾಜಕೀಯವಾಗಿ ಮುಗಿಸಿದರು. ಒಕ್ಕಲಿಗ ನಾಯಕರಾಗಿದ್ದ ಕೃಷ್ಣಪ್ಪ ಅವರು ಆಗಲೇ ಈ ಪಾಪದ ಹೊರೆಯನ್ನು ಹೊರಬೇಕಾಗುತ್ತದೆ ಎಂದು ದೇವೇಗೌಡರಿಗೆ ಹೇಳಿದ್ದರು. ಈಗ ಒಕ್ಕಲಿಗ ನಾಯಕ ಕೃಷ್ಣಪ್ಪ ಅವರ ಮಾತು ನಿಜವಾಗಿದೆ. ನಾನು ಮತ್ತು ಜಾಲಪ್ಪ ಒಟ್ಟಾಗಿ ರಾಮಕೃಷ್ಣ ಹೆಗಡೆಯವರ ಬದಲಿಗೆ ದೇವೇಗೌಡರನ್ನು ಮುಖ್ಯಮಂತ್ರಿ ಮಾಡಿದೆವು. ಆಮೇಲೆ ನನ್ನನ್ನೇ ಪಕ್ಷದಿಂದ ಉಚ್ಚಾಟಿಸಿದರು ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಮಾತ್ರ ಸುಭದ್ರ ಸರ್ಕಾರ ಕೊಡಲು ಸಾಧ್ಯ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹಾಸನ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ. ಇದು ಶತಸಿದ್ಧ. ಹಾಸನದಲ್ಲಿ ಈ ಮಟ್ಟದ ದೊಡ್ಡ ಜನ ಕಲ್ಯಾಣ ಕಾಂಗ್ರೆಸ್ ಸಮಾವೇಶ ಹಿಂದೆಂದೂ ಆಗಿರಲಿಲ್ಲ. ಇದರಲ್ಲಿ ಸ್ವಾಭಿಮಾನಿ ಒಕ್ಕೂಟಗಳು, ಕಾಂಗ್ರೆಸ್ಸೇತರ ಸಂಘಟನೆಗಳು ಮತ್ತು ಕಾಂಗ್ರೆಸ್ ಪಕ್ಷ ಒಟ್ಟಾಗಿ ಶ್ರಮಿಸಿವೆ. ಕಾರ್ಯಕ್ರಮದ ಆಯೋಜಕರೆಲ್ಲರಿಗೂ ಧನ್ಯವಾದಗಳು ಎಂದು ಸಿಎಂ ಧನ್ಯವಾದ ತಿಳಿಸಿದ್ದಾರೆ.. ‌

- Advertisement -

Latest Posts

Don't Miss