Tuesday, June 3, 2025

Latest Posts

ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಹಳ್ಳಿ ಹಕ್ಕಿ..!

- Advertisement -

political story :

ಇತ್ತೀಚೆಗಷ್ಟೆ ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ್ದ ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿಯಾಗಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿ ಹೆಚ್.ವಿಶ್ವನಾಥ್ ಸಿಎಂ ಬೊಮ್ಮಾಯಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಘೋಷಿಸಿದ್ದ ಹೆಚ್.ವಿಶ್ವನಾಥ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು. ಸರ್ಕಾರ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸುತ್ತಿದ್ದ ಹೆಚ್.ವಿಶ್ವನಾಥ್ ಇತ್ತೀಚೆಗೆ ಮಾಧ್ಯಮಗಳ ಜೊತೆ ಮಾತನಾಡಿ ನನ್ನ ರಕ್ತದಲ್ಲೇ ಕಾಂಗ್ರೆಸ್ ಇದೆ. ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ್ದರು.

ಕಾಂಗ್ರೆಸ್ ಸೇರ್ಪಡೆ ಘೋಷಣೆ ಬಳಿಕ ಇದೀಗ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗುವ ಮೂಲಕ ಅಚ್ಚರಿಗೆ ಕಾರಣರಾಗಿದ್ದಾರೆ. ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ನಡೆ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.

ಆರೋಪಿಗಳನ್ನ ಪತ್ತೆ ಹಚ್ಚಿದವರಿಗೆ ಲಕ್ಷ ಲಕ್ಷ ಬಹುಮಾನ..!

ಲಾಲ್​ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಬೊಮ್ಮಾಯಿ ಚಾಲನೆ

ಕರ್ತವ್ಯ ನಿರತ ಸರ್ಕಲ್ ಇನ್ ಪೆಕ್ಟರ್ ಮೇಲೆ ಹಲ್ಲೆ..!

- Advertisement -

Latest Posts

Don't Miss