Friday, December 5, 2025

Latest Posts

ಹೆಚ್‌.ವೈ. ಮೇಟಿ ವಿಧಿವಶ – ಸಿದ್ದು, ದೇವೇಗೌಡ ಸೇರಿದಂತೆ ಗಣ್ಯರ ಸಂತಾಪ

- Advertisement -

ರಾಜ್ಯದ ಹಿರಿಯ ರಾಜಕಾರಣಿ ಹಾಗೂ ಬಾಗಲಕೋಟೆಯ ಶಾಸಕ ಹೆಚ್‌.ವೈ. ಮೇಟಿ ಅವರು ಇಂದು ಜೀವನ ಪಯಣ ಮುಗಿಸಿದ್ದಾರೆ. 79ನೇ ವಯಸ್ಸಿನಲ್ಲಿ ಅವರು ವಿಧಿವಶರಾಗಿದ್ದು, ಅವರ ನಿಧನದಿಂದ ರಾಜ್ಯ ರಾಜಕೀಯ ವಲಯದಲ್ಲಿ ಶೋಕದ ಛಾಯೆ ಆವರಿಸಿದೆ.

ಮೇಟಿ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಹಿರಿಯ ಸದಸ್ಯರಾಗಿದ್ದು, 14ನೇ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಸಿದ್ದರಾಮಯ್ಯ ನೇತೃತ್ವದ ಹಿಂದಿನ ಸಚಿವ ಸಂಪುಟದಲ್ಲೂ ಮೇಟಿ ಅವರು ಸಚಿವರಾಗಿ ಕೆಲಸ ಮಾಡಿದ್ದರು. ಜನಸಾಮಾನ್ಯರ ಪರ ಹೋರಾಡಿದ ರಾಜಕಾರಣಿಯಾಗಿ ಅವರು ಹೆಸರುವಾಸಿಯಾಗಿದ್ದರು.

ಮೇಟಿ ಅವರ ನಿಧನಕ್ಕೆ ರಾಜ್ಯದ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ಹಿರಿಯ ನಾಯಕ ಹಾಗೂ ಮಾಜಿ ಸಚಿವ ಹೆಚ್‌.ವೈ. ಮೇಟಿ ಅವರ ನಿಧನ ಸುದ್ದಿ ತಿಳಿದು ದುಃಖವಾಗಿದೆ ಎಂದು ಹೇಳಿದ್ದಾರೆ. ಇದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಾ ಕಳೆದ ಗುರುವಾರ ಅವರ ಆರೋಗ್ಯ ವಿಚಾರಿಸಿದ್ದೆ, ಗುಣಮುಖರಾಗಿ ಮತ್ತೆ ನಮ್ಮೊಡನೆ ಸೇರುತ್ತಾರೆ ಅನ್ನಿಸಿತು. ಆದರೆ, ಅದು ಸಾಧ್ಯವಾಗಲಿಲ್ಲ ಎಂದು ಭಾವನಾತ್ಮಕವಾಗಿ ತಿಳಿಸಿದ್ದಾರೆ.

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸಹ ತಮ್ಮ ಸಂತಾಪವನ್ನು ವ್ಯಕ್ತಪಡಿಸಿದ್ದು, ಮೇಟಿ ಅವರ ನಿಧನ ಕರ್ನಾಟಕ ರಾಜಕೀಯಕ್ಕೆ ದೊಡ್ಡ ನಷ್ಟ ಎಂದು ಹೇಳಿದ್ದಾರೆ. ಇನ್ನು ನಾಳೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ, ಲಿಂಗಾಯತ ಸಮುದಾಯದ ಸಂಪ್ರದಾಯದಂತೆ ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ಹೆಚ್‌.ವೈ. ಮೇಟಿ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ.

ವರದಿ: ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss