Tuesday, May 28, 2024

Latest Posts

ಅವನು ಮುಸ್ಲಿಂ ಆಗಿರುತ್ತಿದ್ದರೆ, ಪ್ರಕರಣ ಬೇರೆ ತಿರುವು ಪಡೆದುಕೊಳ್ಳುತ್ತಿತ್ತು: ಪ್ರಜ್ವಲ್ ಕೇಸ್ ಬಗ್ಗೆ ನಟಿ ಸ್ವರಾ ಮಾತು

- Advertisement -

National News: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ಇಡೀ ದೇಶದಲ್ಲಿ ಸದ್ದು ಮಾಡುತ್ತಿದೆ. ಈ ಬಗ್ಗೆ ಹಲವರು ಪರವಿರೋಧ ಹೇಳಿಕೆ ನೀಡುತ್ತಿದ್ದಾರೆ. ಈಗಾಗಲೇ ಕರ್ನಾಟಕದ ಹಲವೆಡೆ ಪ್ರತಿಭಟನೆ ಕೂಡ ನಡೆದಿದೆ. ಬಾಲಿವುಡ್ ತನಕ ಸುದ್ದಿ ತಲುಪಿದ್ದು, ಬಾಲಿವುಡ್ ನಟಿ ಸ್ವರಾ ಭಾಸ್ಕರ್, ಪ್ರಜ್ವಲ್ ಏನಾದರೂ ಮುಸ್ಲಿಂ ಆಗಿದ್ದರೆ, ಪ್ರಕರಣ ಬೇರೆಯದ್ದೇ ತಿರುವು ಪಡೆಯುತ್ತಿತ್ತು. ತಪ್ಪು ಮಾಡಿರುವ ವ್ಯಕ್ತಿ ಯಾವ ಧರ್ಮದವನು ಎಂಬುದರ ಮೇಲೆ ಶಿಕ್ಷೆ, ಹೋರಾಟಗಳು ನಿರ್ಧಾರವಾಗುತ್ತದೆ ಎಂದು ಧರ್ಮವನ್ನು ಎಳೆದು ತಂದಿದ್ದಾರೆ.

ಪ್ರಜ್ವಲ್ ರೇವಣ್ಣ ಸಾವಿರಕ್ಕೂ ಹೆಚ್ಚು ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿ ಬರುತ್ತಿದ್ದು, ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಕಾಂಗ್ರೆಸ್‌ಸಿಗರು ಕೂಡ ಈ ಬಗ್ಗೆ ಪ್ರತಿಭಟನೆ ನಡೆಸಿ, ವಾಗ್ದಾಳಿ ನಡೆಸಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಕೂಡ, ಈ ಬಗ್ಗೆ ಮಾತನಾಡಿ, ತಪ್ಪು ಯಾರು ಮಾಡಿದರೂ ತಪ್ಪೇ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುತ್ತದೆ ಎಂದಿದ್ದಾರೆ.

ಇನ್ನು ರಾಜ್ಯ ಸರ್ಕಾರ ಈ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸಿದ್ದು, ವಿಚಾರಣೆ ನಡೆಸಲಾಗಿದೆ. ಪ್ರಜ್ವಲ್ ಚಾಲಕನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಮೇ 3ರಂದು ಜರ್ಮನಿಗೆ ತೆರಳಿರುವ ಪ್ರಜ್ವಲ್, ವಾಪಸ್ ಬರಲಿದ್ದಾರೆ. ಬಳಿಕ ಅವರನ್ನು ಸಹ ವಿಚಾರಣೆಗೆ ಒಳಪಡಿಸಲಾಗುತ್ತದೆ.

ಇವರ ಚಟಕ್ಕೆ ವಿಡಿಯೋ ಮಾಡಿಕೊಳ್ಳುತ್ತಾರೆ. ಇಂಥವರನ್ನ ಭಗವಂತನೂ ಕ್ಷಮಿಸಲ್ಲ: ಡಿ.ಕೆ.ಶಿವಕುಮಾರ್

ಕೆಲಸ ಮಾಡಿದ್ದೇನೆ ಓಟು ಕೊಡಿ ಎನ್ನುವ ಬದಲು ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಮಾಡಿ ಓಟು ಕೇಳುತ್ತಾರೆ: ಸಿಎಂ

ರಾಮಮಂದಿರಕ್ಕೆ ನಾವೂ ಇಟ್ಟಿಗೆ ಕೊಟ್ಟಿದ್ದೀವಿ, ಆದ್ರೆ ಬಿಜೆಪಿಯವರು ಧರ್ಮಗಳ ಮಧ್ಯೆ ತಂದಿಡುತ್ತಿದ್ದಾರೆ: ನಟ ವಿಜಿ

- Advertisement -

Latest Posts

Don't Miss