Film News:
ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಸಂಗೀತ ನಿರ್ದೇಶಕ ನಾದ ಬ್ರಹ್ಮ ಹಂಸಲೇಖ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಹಿಂದೆ ಹಂಸಲೇಖ ಅವರು ಒಪನ್ ಹಾರ್ಟ್ ಸರ್ಜರಿಗೆ ಒಳಗಾಗಿದ್ದರು. ಸದ್ಯ ಫಸ್ಟ್ ಬ್ಲಾಕ್ ಅಪೋಲೊ ಆಸ್ಪತ್ರೆಯಲ್ಲಿ ಜನರಲ್ ವಾರ್ಡ್ ನಲ್ಲೇ ಒಂದು ದಿನ ರೆಸ್ಟ್ ಮಾಡುವಂತೆ ವೈದ್ಯರು ಸಲಹೆ ಕೊಟ್ಟಿದ್ದಾರೆ ಎನ್ನಲಾಗಿದೆ. ವೈದ್ಯರ ಸಲಹೆ ಮೇರೆಗೆ ಒಂದು ದಿನದ ಮಟ್ಟಿಗೆ ಹಂಸಲೇಖ ಆಸ್ಪತ್ರೆಯಲ್ಲಿ ಉಳಿಯಲಿದ್ದಾರೆ.



