ಹಾನಗಲ್: ಟಾಟಾ ಏಸ್‌-ಕಾರಿನ ನಡುವೆ ಭೀಕರ ರಸ್ತೆ ಅಪಘಾತ-ಮೂವರ ಸ್ಥಿತಿ ಗಂಭೀರ!

Hanagal: ಹಾನಗಲ್ : ಟಾಟಾ ಏಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ  ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಕ್ರಾಸ್ ಬಳಿ ನಡೆದಿದೆ.

ಅರೇಮಲ್ಲಾಪುರ ಗ್ರಾಮದಿಂದ ಹಾನಗಲ್‌ ಕಡೆಗೆ ಮದುವೆ ಸಮಾರಂಭದ ಅಡುಗೆ ಮಾಡಲು ತೆರಳುತ್ತಿದ್ದ ಟಾಟಾ ಏಸ್ ವಾಹನಕ್ಕೆ ಎದುರಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಟಾಟಾ ಎಸ್ ವಾಹನದಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಡೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

 

About The Author