Manglore News : ಭೂಗತಪಾತಕಿ ರವಿ ಪೂಜಾರಿ ಮತ್ತು ಕಲಿಯೋಗೀಶ ಸಹಚರನನ್ನು ಕೊಣಾಜೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಟೋರಿಯಸ್ ಶಾರ್ಪ್ ಶೂಟರ್ ಕೇರಳದ ಮಂಜೇಶ್ವರ ಪೈವಳಿಕೆ ನಿವಾಸಿ ಮೊಹಮ್ಮದ್ ಹನೀಫ್ ಯಾನೆ ಅಲಿ ಮುನ್ನಾ ಬಂಧಿತ ಆರೋಪಿ. ಆರೋಪಿ ಮೊಹಮ್ಮದ್ ಹನೀಫ್ ಜಿಲ್ಲೆಯ ಹಲವು ಠಾಣೆಗಳಲ್ಲಿ ವಾರೆಂಟ್ ಎದುರಿಸುತ್ತಿದ್ದನು.
ಆರೋಪಿ ಹನೀಫ್ ನಟೋರಿಯಸ್ ಕ್ರಮಿನಿಲ್ ಆಗಿದ್ದು, ರವಿಪೂಜಾರಿಯ ಎಲ್ಲ ಕೃತ್ಯಗಳಿಗೆ ಮಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳನ್ನು ಕಾರ್ಯಕ್ಷೇತ್ರ ಮಾಡಿಸಿಕೊಂಡಿದ್ದು ಹಲವು ಶೂಟೌಟ್, ದರೋಡೆ, ಬೆದರಿಕೆ ಪ್ರಕರಣದಲ್ಲಿ ರಾಜ್ಯದ ಅನೇಕ ಠಾಣೆಗಳಿಂದ ಬಂಧನ ವಾರಂಟ್ ಎದುರಿಸುತ್ತಿದ್ದನು. ಈತನ ವಿರುದ್ಧ ಕೊಣಾಜೆ, ಮಂಗಳೂರು ಉತ್ತರ, ಪುತ್ತೂರು, ಬರ್ಕೆ, ವಿಟ್ಲ, ಉಳ್ಳಾಲ, ಬೆಂಗಳೂರು ವಿಮಾನ ನಿಲ್ದಾಣ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ.
2010 ಮತ್ತು 2013 ಕಾಸರಗೋಡು ಬೇವಿಂಜ ಪಿಡಬ್ಲ್ಯುಡಿ ಗುತ್ತಿಗೆದಾರರ ಶೂಟೌಟ್ ಪ್ರಕರಣ, ಕೇರಳದ ಮಂಜೇಶ್ವರದಲ್ಲಿ ಕಳ್ಳತನ, ಕುಂಬಳೆ ಹಾಗೂ ವಿದ್ಯಾನಗರ ಠಾಣೆಯಲ್ಲೂ ಪ್ರಕರಣಗಳು ದಾಖಲಾಗಿವೆ. ಮಂಗಳೂರು ಉತ್ತರ ಠಾಣಾ ವ್ಯಾಪ್ತಿಯ ಸಂಜೀವ್ ಶೆಟ್ಟಿ ಸಿಲ್ಕ್ಸ್ ಮಳಿಗೆ ಮತ್ತು ಪುತ್ತೂರು ರಾಜಧಾನಿ ಜ್ಯುವೆಲ್ಲರ್ಸ್ನಲ್ಲಿ ಶೂಟೌಟ್ ನಡೆಸಿದ್ದನು.
ಆರೋಪಿಯನ್ನು ಕೇರಳದಲ್ಲಿ ಬಂಧಿಸಲಾಗಿದ್ದು, ಈಗಲೂ ಹಫ್ತಾ ವಸೂಲಿಯಲ್ಲಿ ತೊಡಗಿಸಿಕೊಂಡಿದ್ದನು ಎನ್ನಲಾಗಿದೆ. ಎಸಿಪಿ ಧನ್ಯ ನಾಯಕ್ ನೇತೃತ್ವದ ತಂಡ ಮತ್ತು ಕೊಣಾಜೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
Cow : ವಿಜಯನಗರದಲ್ಲಿ ಎರಡು ಕಾಲುಗಳುಳ್ಳ ಕರು ಜನನ: ಏನಿದು ಅಚ್ಚರಿ ಎಂದ ಗ್ರಾಮಸ್ಥರು!
Dhananjay : ಹುಲಿ ಉಗುರು ಪ್ರಕರಣ : ಧನಂಜಯ್ ಗುರೂಜಿ ಮನೆ ಮೇಲೆ ಅರಣ್ಯಾಧಿಕಾರಿಗಳ ರೇಡ್..!
Devara Gudda : ಮಹಿಳೆಯ ಹಸ್ತಕ್ಷೇಪದಿಂದ ಇಕ್ಕಟ್ಟಿಗೆ ಸಿಲುಕಲಿದೆ ಸರ್ಕಾರ ; ದೇವರಗುಡ್ಡ ಕಾರ್ಣಿಕ ನುಡಿ