ಹರ್ಯಾಣ :ಸಚಿವರಾದ ಸಂದೀಪ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಜೂನಿಯರ್ ಅಥ್ಲೆಟಿಕ್ಸ್ ಕೋಚ್ ಅವರನ್ನು ನೀತಿ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಅವರ ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಆಗಸ್ಟ್ 11 ರಂದು ಹರಿಯಾಣದ ಕ್ರೀಡಾ ಇಲಾಖೆಯ ನಿರ್ದೇಶಕ ಯಶೇಂದ್ರ ಸಿಂಗ್ ಅವರು ಅಮಾನತು ಆದೇಶವನ್ನು ಹೊರಡಿಸಿದ್ದಾರೆ. ಆದರೆ ಅಮಾನತಿಗೆ ಕಾರಣಗಳನ್ನು ಉಲ್ಲೇಖಿಸಲಾಗಿಲ್ಲ.
ಆದಾಗ್ಯೂ, ಅಶಿಸ್ತು ಮತ್ತು ಸೇವಾ ನಡವಳಿಕೆ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಆಕೆಯ ಸೇವೆಯನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕೃತ ಮೂಲಗಳು ಪಿಟಿಐಗೆ ತಿಳಿಸಿವೆ.
‘ಜೂನಿಯರ್ ಅಥ್ಲೆಟಿಕ್ ಕೋಚ್‌ನ ಸೇವೆಯನ್ನು ಪೂರ್ವಾಗ್ರಹವಿಲ್ಲದೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.
GruhaLaxmi: ಕರೆಂಟ್ ಬಿಲ್ ಕೊಡಲು ಹೋದ ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ:
Jeffrey Ferguson : ನ್ಯಾಯಾಧೀಶನೇ ಪತ್ನಿಯನ್ನು ಗುಂಡಿಟ್ಟು ಕೊಂದ..?!