Thursday, December 12, 2024

Latest Posts

ಹಾಸನ: ಅಕ್ಟೋಬರ್ 13 ರಿಂದ 27ರ ವರೆಗೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ

- Advertisement -

Hassan News:

ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸಲಿರುವ ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಅ.13 ರಿಂದ ಅ.27 ರವರೆಗೆ ನಡೆಯಲಿದ್ದು, ಇಂದು ದೇವಿಯ ಒಡವೆಗಳನ್ನು ದೇವಾಲಯಕ್ಕೆ ಕೊಂಡೊಯ್ಯಲಾಯಿತು.

ಹಾಸನ ತಹಶೀಲ್ದಾರ್ ನಟೇಶ್ ಸಮ್ಮುಖದಲ್ಲಿ ಸಾಲಗಾಮೆ ರಸ್ತೆಯಲ್ಲಿರುವ ಜಿಲ್ಲಾ ಖಜಾನೆಯಿಂದ ಒಡವೆಗಳನ್ನು ಹೊರತಂದು ಪುಷ್ಪಾಲಂಕೃತಗೊಂಡ ಅಡ್ಡ ಪಲ್ಲಕ್ಕಿಯಲ್ಲಿ ಇರಿಸಲಾಯಿತು. ಸಂಪ್ರದಾಯಂತೆ ಮಡಿವಾಳರು ಪಂಜು ಹಿಡಿದು ಮತ್ತು ಮುತ್ತೈದೆಯರು ಆರತಿ ಬೆಳಗಿದರು. ಈ ವೇಳೆ ಭಕ್ತರು ಹಾಸನಾಂಬೆ ದೇವಿಗೆ ಜೈಕಾರ ಕೂಗಿದರು. ಬೆಳ್ಳಿ ರಥದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಮಂಗಳ ವಾದ್ಯಗಳೊಂದಿಗೆ ಮೆರವಣಿಗೆ ಮೂಲಕ ಹಾಸನಾಂಬೆ ದೇಗುಲಕ್ಕೆ ತರಲಾಯಿತು.

ಸಂಪ್ರದಾಯದಂತೆ ಆಶ್ವೀಜ ಮಾಸದ ಮೊದಲ ಗುರುವಾರವಾದಂದು ಗರ್ಭಗುಡಿಯ ಬಾಗಿಲು ತೆರೆಯಲಿದೆ. ಒಡವೆ ಕೊಂಡೊಯ್ಯುವ ರಸ್ತೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಮಹಾಕುಂಭ ಮೇಳ ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ: ಡಾ: ಕೆ.ಸಿ ನಾರಾಯಣ ಗೌಡ

ಬೀದಿ ನಾಟಕ, ಜಾನಪದ ಸಂಗೀತ ಕಲಾತಂಡಗಳ ಆಯ್ಕೆಗೆ ಅರ್ಜಿ ಆಹ್ವಾನ

ಹಾಸನ: ಆರ್.ಮೋಹನ್ ನೇತೃತ್ವದಲ್ಲಿ ವಾರ್ಡ್ ಪ್ರಮುಖರ ಸಭೆ ಮತ್ತು ನಗರಸಭೆ ಸದಸ್ಯರ ಸಮಾಲೋಚನಾ ಸಭೆ:

- Advertisement -

Latest Posts

Don't Miss