Friday, May 17, 2024

Latest Posts

ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ

- Advertisement -

ಹಾಸನ: ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಜಿಲ್ಲಾ ವಕೀಲರ ಸಂಘದ ವತಿಯಿಂದ ಇಂದು ಜಿಲ್ಲಾಧಿಕಾರಿ‌ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಕೋರ್ಟ್‌ನ ಕಾರ್ಯಕಲಾಪಗಳಿಂದ ವಕೀಲರು ಹೊರಗುಳಿದರು. ನ್ಯಾಯಾಲಯದ ಆವರಣದಿಂದ ಜಿಲ್ಲಾಧಿಕಾರಿ‌ ಕಚೇರಿ‌ ವರೆಗೆ ಬೈಕ್ ರ್ಯಾಲಿ ನಡೆಸಿ  ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಶಿಷ್ಟಾಚಾರ ಉಲ್ಲಂಘನೆ ಆರೋಪ, ಪಿಡಿಓ ವಿರುದ್ಧ ಪ್ರತಿಭಟನೆ

ವಕೀಲರ ಸಂಘದ ಜಿಲ್ಲಾಧ್ಯಕ್ಷ ಪೂರ್ಣಚಂದ್ರ ತೇಜಸ್ವಿ ಮಾತನಾಡಿ, ಇತ್ತೀಚೆಗೆ ವಕೀಲರ  ಮೇಲೆ ನಿರಂತರ ಹಲ್ಲೆ, ದೌರ್ಜನ್ಯಗಳು ನಡೆಯುತ್ತಿದ್ದು, ನ್ಯಾಯಕ್ಕಾಗಿ ಹೊರಾಡುವ ವಕೀಲರ ಪರಿಸ್ಥಿತಿಯೇ ಹೀಗಾದರೆ ಸಾಮಾನ್ಯ ಜನರ ಗತಿ ಏನು ಎಂದು ಪ್ರಶ್ನಿಸಿದರು. ಕರ್ನಾಟಕ ವಕೀಲರ ಪರಿಷತ್ತು ವತಿಯಿಂದ ರಾಜ್ಯ ಸರ್ಕಾರಕ್ಕೆ ಒಂದು ವರ್ಷದ ಹಿಂದೆ ವಕೀಲರ ಸಂರಕ್ಷಣಾ ಕಾಯ್ದೆಯ ಕರಡು ಪ್ರತಿಯನ್ನು ಸಲ್ಲಿಸಲಾಗಿದೆ. ಆದರೆ ಈ ಬಗ್ಗೆ ಮುಖ್ಯಮಂತ್ರಿ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಈ ಕರಡು ಪ್ರತಿಯನ್ನು ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಮಂಡನೆ ಮಾಡಿ , ಉಭಯ ಸದನಗಳ ಒಪ್ಪಿಗೆ ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತ್ವರಿತವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಸಿಎಂ ಬೊಮ್ಮಾಯಿಗೆ ಕಪ್ಪು ಬಾವುಟ ಪ್ರದರ್ಶಿಸಿ ರೈತರಿಂದ ಪ್ರತಿಭಟನೆ

ಸರ್ಕಾರಿ ನೌಕರರಿಗೆ ತೊಂದರೆಯಾದರೆ ಅವರ ರಕ್ಷಣೆಗೆ ಕಾಯ್ದೆ ಇದೆ. ಆದರೆ  ಸಾರ್ವಜನಿಕರ ಹಿತಕ್ಕಾಗಿ ಕೆಲಸ ಮಾಡುವ ವಕೀಲರ ಮೇಲೆ ಪದೇ ಪದೇ ಹಲ್ಲೆಯಾಗುತ್ತಿದೆ. ಸರ್ಕಾರದಿಂದ ವಕೀಲರಿಗೆ ರಕ್ಷಣೆ ಕೊಡಲು ಸಾಧ್ಯವಾಗುತ್ತಿಲ್ಲ. ಕೂಡಲೇ ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ತರಬೇಕು ಇಲ್ಲದಿದ್ದರೆ ರಾಜ್ಯದಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಸಂಘದ ಜಿಲ್ಲಾಧ್ಯಕ್ಷ ಪೂರ್ಣಚಂದ್ರ ತೇಜಸ್ವಿ, ಪ್ರಧಾನ ಕಾರ್ಯದರ್ಶಿ ಜಿ.‌ರಂಗಸ್ವಾಮಿ, ಖಜಾಂಚಿ ಕೆ.ವಿ.  ಲೋಹಿತ್, ಉಪಾಧ್ಯಕ್ಷ ಎಸ್.ಬಿ. ಮಂಜುನಾಥ್, ಜಂಟಿ ಕಾರ್ಯದರ್ಶಿ ಲಲಿತಾ ಹಾಗೂ ಸದಸ್ಯರು ಇದ್ದರು.

ವಿಷ್ಣುವಿನ ಅನುಗ್ರಹಕ್ಕಾಗಿ ಧನುರ್ಮಾಸದಲ್ಲಿ ಈ ನಿಯಮಗಳನ್ನೂ ಪಾಲಿಸಿ ನಿಷ್ಠೆಯಿಂದ ಪೂಜಿಸಿ..!

ನಟ ದುನಿಯಾ ವಿಜಯ್ ಗೆ ಪೊಲೀಸರ ಬುಲಾವ್

- Advertisement -

Latest Posts

Don't Miss