ಹಾಸನ : ಮಳೆಹಾನಿ ಪ್ರದೇಶಗಳಿಗೆ ಹಾಸನದ ಶಾಸಕ ಸ್ವರೂಪ್ ಪ್ರಕಾಶ್ ಭೇಟಿ ನೀಡಿದ್ದು, ಅಧಿಕಾರಿಗಳೊಂದಿಗೆ ಸೇರಿ ಪರಿಶೀಲನೆ ನಡೆಸಿದ್ದಾರೆ.
ಹಾಸನ ನಗರದ ದೇವೇಗೌಡನಗರ, ಕೃಷ್ಣಾನಗರದಲ್ಲಿ ಮಳೆಬಂದು, ಈ ಪ್ರದೇಶಗಳಲ್ಲಿ ಹಾನಿಯಾಗಿದ್ದು, ಈ ಸ್ಥಳಕ್ಕೆ ಭೇಟಿ ನೀಡಿ, ಮನೆಯವರಿಗೆ ಶಾಸಕ ಸ್ವರೂಪ್ ಪ್ರಕಾಶ್ ಸಾಂತ್ವನ ಹೇಳಿದ್ದಾರೆ. ಅಲ್ಲದೇ, ಸೂಕ್ತವಾದ ಪರಿಹಾರ ನೀಡುವುದಾಗಿ, ಭರವಸೆ ನೀಡಿದ್ದಾರೆ.
ಭಾನುವಾರ ರಾತ್ರಿ ಈ ಸ್ಥಳದಲ್ಲಿ ಮಳೆ ಸುರಿದಿದ್ದು, ಸಾಕಷ್ಟು ಹಾನಿಯುಂಟಾಗಿತ್ತು, ಸಾಕಷ್ಟು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದವು. ಹಾಸನ ತಾಲೂಕಿನಾದ್ಯಂತ 60ಕ್ಕೂ ಹೆಚ್ಚು ಮನೆಗಳಿಗೆ ಹಾನಿಯುಂಟಾಗಿದೆ. ಹೀಗಾಗಿ ಈ ಸ್ಥಳಗಳಿಗೆ ಭೇಟಿ ನೀಡಿದ ಬಳಿಕ, ಸ್ವರೂಪ್, ತಹಸಿಲ್ದಾರ್ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ.
ರಾಜ್ಯ ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ಅವರ ರಾಜೀನಾಮೆ
ಸುಳ್ಳು ಗ್ಯಾರಂಟಿಗಳ ವಿರುದ್ಧ ಹೋರಾಟ; ಮುಖಂಡರಿಗೆ ರಣವೀಳ್ಯ ನೀಡಿದ ಕುಮಾರಸ್ವಾಮಿ