Hassan News: ಹಾಸನ: ಹಾಸನದಲ್ಲಿ ಪಿಸ್ತೂಲ್ ಹಿಡಿದು ದರೋಡೆಕೋರರು ಮನೆಗೆ ನುಗ್ಗಿದ್ದು, ಮನೆಯ ಗೋಡೆಗೆ ಗುಂಡು ಹಾರಿಸಿ, ಚಿನ್ನಾಭರಣ ಕಸಿದುಕೊಂಡು ಎಸ್ಕೇಪ್ ಆಗಿದ್ದಾರೆ.
ಹಾಸನ ಜಿಲ್ಲೆ, ಬೇಲೂರು ತಾಲೂಕಿನ, ಮುದಿಗೆರೆ ಕ್ರಾಸ್‌ನಲ್ಲಿ ಈ ಘಟನೆ ನಡೆದಿದ್ದು, ರವಿ ಎಂಬುವವರ ಮನೆಯಲ್ಲಿ ದರೋಡೆ ಮಾಡಲಾಗಿದೆ. ದರೋಡೆ ಕೋರರು ಮುಖಕ್ಕೆ ಕರ್ಛೀಫ್ ಹಾಕಿಕೊಂಡು ಸಂಜೆ ಮನೆಗೆ ನುಗ್ಗಿದ್ದಾರೆ. ಈ ವೇಳೆ ಮನೆಯಲ್ಲಿ ಪತ್ನಿ ಶೃತಿ ಮತ್ತು ತಾಯಿ ಚಂದ್ರಮ್ಮ ಇದ್ದರು. ಇಬ್ಬರಿಗೂ ಪಿಸ್ತೂಲ್ ತೋರಿಸಿದ ಕಳ್ಳರು, ಮೈಮೇಲಿರುವ ಚಿನ್ನಾಭರಣ ನೀಡುವಂತೆ ಹೆದರಿಸಿದ್ದಾರೆ.
ಚಿನ್ನಾಭರಣ ನೀಡಲು ನಿರಾಕರಿಸಿದಾಗ, ದರೋಡೆಕೋರರು ಗೋಡೆಗೆ ಗುಂಡು ಹಾರಿಸಿದ್ದಾರೆ. ಈ ವೇಳೆ ಹೆದರಿ ಶೃತಿ ಪತಿ ರವಿ ಹೊರಗೆ ಬಂದಿದ್ದು, ಮಕ್ಕಳನ್ನು ಸೇಫ್ಟಿಗಾಗಿ ರೂಮ್‌ನಲ್ಲಿ ಕೂಡಿ ಹಾಕಿದ್ದಾರೆ.
ಒಂದು ಚಿನ್ನದ ತಾಳಿ, ಒಂದು ಜೊತೆ ಚಿನ್ನದ ಓಲೆ, ಎರಡು ಚಿನ್ನದ ಗುಂಡು ಹಾಗೂ ಮೊಬೈಲ್ ಕಸಿದುಕೊಂಡು ಕಳ್ಳರು ಪರಾರಿಯಾಗಲು ಯತ್ನಿಸಿದಾಗ, ಮನೆಯವರು ಅವರನ್ನು ಹಿಡಿಯಲು ಪ್ರಯತ್ನಿಸಿದ್ದಾರೆ. ಈ ವೇಳೆ ಕಳ್ಳರು ಮತ್ತೆ ಗಾಳಿಯಲ್ಲಿ ಫೈರಿಂಗ್ ಮಾಡಿದ್ದಾರೆ.
ಕಳ್ಳರ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೀತಾ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳು ಕೇವಲ ಲೋಕಸಭಾ ಚುನಾವಣೆವರೆಗೂ ಮಾತ್ರ: ಶಾಸಕ ಅರವಿಂದ್ ಬೆಲ್ಲದ್




