Sunday, September 8, 2024

Latest Posts

DK Shivakumar: ಕುಮಾರಸ್ವಾಮಿ ಒಬ್ಬ ಹುಚ್ಚ: ಡಿಕೆಶಿ ವಾಗ್ಧಾಳಿ

- Advertisement -

ಮಂಡ್ಯ ಸಂಸದ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ಮಾತಿನ ಯುದ್ಧ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ , ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ. ಮುಡಾ ಹಗರಣ ವಿಚಾರದಲ್ಲಿ ಅವರು ಮಾಡುತ್ತಿರುವುದು ಆಧಾರರಹಿತ ಆರೋಪ. ಹುಚ್ಚು ಹಿಡಿದಿರುವ ಕಾರಣ ಅವರು ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಮುಡಾ ಹಗರಣ ಹೊರಬರುವಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಕೈವಾಡವಿದೆ ಎಂದು ಹೆಚ್‌.ಡಿ.ಕುಮಾರಸ್ವಾಮಿ ಪರೋಕ್ಷವಾಗಿ ಮಾಡಿರುವ ಆರೋಪದ ಬಗ್ಗೆ ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಪ್ರಶ್ನೆಗೆ ಡಿಕೆಶಿ ಉತ್ತರಿಸಿದರು. “ಮುಡಾ ಹಗರಣ ವಿಚಾರದಲ್ಲಿ ಕುಮಾರಸ್ವಾಮಿ ಮಾಡುತ್ತಿರುವುದು ಆಧಾರರಹಿತ ಆರೋಪ. ಹುಚ್ಚು ಹಿಡಿದಿರುವ ಕಾರಣ ಅವರು ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ” ಎಂದರು.
ಸಿಡಿ ಫ್ಯಾಕ್ಟರಿ ನಂತರ ಈಗ ಮುಡಾ ಫ್ಯಾಕ್ಟರಿ ಹೊರಬರುತ್ತಿದೆ ಎಂಬ ಕುಮಾರಸ್ವಾಮಿ ಟೀಕೆಗೆ “ಕೆಲವೊಬ್ಬರಿಗೆ ನನ್ನನ್ನು ನೆನಪಿಸಿಕೊಳ್ಳದಿದ್ದರೆ ನಿದ್ದೆಯೂ ಬರುವುದಿಲ್ಲ, ತಲೆಯೂ ಓಡುವುದಿಲ್ಲ. ಅವರು ಬಾಯಿಗೆ ಬಂದಂತೆ ಮಾತಾಡುತ್ತಿರುವುದು ಬಹಳ ಸಂತೋಷದ ವಿಚಾರ” ಎಂದು ತಿರುಗೇಟು ನೀಡಿದರು.

ಮಂಡ್ಯದಲ್ಲಿ ತಾವು ಮಾಡುತ್ತಿರುವ ಜನತಾ ದರ್ಶನಕ್ಕೆ ಅಧಿಕಾರಿಗಳು ಹೋಗಬಾರದೆಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ ಎಂಬ ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿ, “ಜನರನ್ನು ಇಟ್ಟುಕೊಂಡು ಜನತಾ ದರ್ಶನ ಮಾಡಲಿ. ಹಳ್ಳಿ, ಹಳ್ಳಿ ತಿರುಗಲಿ, ಯಾರು ಬೇಡ ಎಂದು ಹೇಳಿದ್ದಾರೆ? ಅಧಿಕಾರಿಗಳು ಶಿಷ್ಟಾಚಾರ ಪಾಲಿಸುತ್ತಾರೆ. ಅದರ ಪ್ರಕಾರ ಸಂಸದರನ್ನು ಹೇಗೆ ಸ್ವಾಗತಿಸಬೇಕೋ ಆ ರೀತಿ ಕೆಲಸ ಮಾಡುತ್ತಾರೆ. ನಾವು ದೆಹಲಿಗೆ ತೆರಳಿ ಅಲ್ಲಿನ ಅಧಿಕಾರಿಗಳನ್ನು ಬಳಸಿಕೊಳ್ಳಲು ಆಗುತ್ತದೆಯೇ? ಜನಕ್ಕೆ ಹೋಗಬೇಡಿ ಎಂದು ಹೇಳಲು ಆಗುತ್ತದೆಯೇ? ನನಗೆ ಈ ಆರೋಪದ ವಿಚಾರ ಗೊತ್ತೇ ಇಲ್ಲ. ನನಗೂ ಇದಕ್ಕೂ ಯಾವುದೇ ರೀತಿಯ ಸಂಬಂಧವೂ ಇಲ್ಲ” ಎಂದು ಉತ್ತರಿಸಿದರು.

“ಇಷ್ಟು ದಿನ ಹೊರಬರದ ಹಗರಣ ಇದಕ್ಕಿದ್ದಂತೆ ಹೇಗೆ ಹೊರಬಂತು? ಇದರ ಹಿಂದಿರುವ ಪಾತ್ರ ಯಾರದೆಂಬುದು ನನಗೆ ಗೊತ್ತಿದೆ” ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್​ ವಿರುದ್ಧ ಮೈಸೂರಿನಲ್ಲಿ ಆರೋಪ ಮಾಡಿದ್ದರು. ಮುಂದುವರೆದು, “ಮುಡಾ ಭ್ರಷ್ಟಾಚಾರದ ಬಗ್ಗೆ ಬಿಜೆಪಿಯವರು ಹೋರಾಟ ಮಾಡುತ್ತಿದ್ದಾರೆ. ಆದರೆ, ಹಗರಣ ಹೊರಬರಲು ಕಾಂಗ್ರೆಸ್​ನ ಪ್ರಭಾವಿ, ಮುಖ್ಯಮಂತ್ರಿ ಆಕಾಂಕ್ಷಿಯ ಕೈವಾಡವಿದೆ. ಈಗ ಸಿಡಿ ಫ್ಯಾಕ್ಟರಿ ಬಂದ್ ಆಯಿತು, ಮುಡಾ ಫ್ಯಾಕ್ಟರಿ ಶುರುವಾಯಿತು” ಎಂದಿದ್ದರು.

- Advertisement -

Latest Posts

Don't Miss