- Advertisement -
Haveri News: ಹಾವೇರಿ: ಕೆರೆಯಲ್ಲಿ ಮೀನು ಹಿಡಿಯಲು ಹೋಗಿ 68 ವರ್ಷದ ವೃದ್ದ ಮೃತ ಪಟ್ಟಿರುವ ಘಟನೆ ಹಾನಗಲ್ ತಾಲೂಕಿನ ಅಕ್ಕಿವಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮವಾರ ಮುಂಜಾನೆ 11ಗಂಟೆ ಸುಮಾರಿಗೆ ಅಕ್ಕಿವಳ್ಳಿ ಗ್ರಾಮದ ಹಿರೇ-ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ (ಗುತ್ತೆಪ್ಪ ಯಳ್ಳುರ) ಎಂಬ 68 ವರ್ಷದ ವೃದ್ಧ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಸೋಮವಾರ ವೃದ್ಧನ ಮೃತದೇಹ ಪತ್ತೆಯಾಗದ ಕಾರಣ ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಶೋಧ ಕಾರ್ಯ ಮುಂದುವರೆದಿತ್ತು. ಮರುದಿನ ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ವೃದ್ಧನ ಮೃತದೇಹ ಪತ್ತೆಯಾಗಿದೆ. ಈ ಕುರಿತು ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -

