political news:
ವಿಧಾನಸಭೆ ಚುನಾವಣೆ ಸಮೀಪಿಸುತಿದ್ದಂತೆ ರಾಗಕೀಯ ರಂಗದಲ್ಲಿ ಪಕ್ಷದ ನಾಯಕರು ಪಕ್ಷ ಬದಲಾವಣೆಯ ವಿಚಾರ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಈಗಾಗಲೆ ಹಲವಾರು ನಾಯಕರು ಪಕ್ಷವನ್ನು ಬದಲಾಯಿಸಿದ್ದಾರೆ.
ಈಗ ಹಾವೇರಿಯಲ್ಲಿಯೂ ಸಹ ಕಾಂಗ್ರೆಸ್ ನಾಯಕರೊಬ್ಬರು ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ. ಹಾವೇರಿಯಲ್ಲಿ ಕಾಂಗ್ರೆಸ್ ನಾಯಕರ ನಡುವೆ ಒಳಜಗಳ ಶುರುವಾಗಿದ್ದು ಹಾವೇರಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎಂ.ಎಂ.ಹಿರೆಮಠ ರಾಜಿನಾಮೆ ನೀಡಿದ್ದಾರೆ. ಅಲ್ಲದೇ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ಗುಡ್ಬೈ ಹೇಳಿದ್ದಾರೆ. ಈ ಕುರಿತಂತೆ .ಹಿರೆಮಠ ಅವರು ತಮ್ಮ ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅವರಿಗೆ ರವಾನಿಸಿದ್ದಾರೆ.
ಇಲ್ಲಿವರೆಗೂ ಪಕ್ಷ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಬಂದಿದ್ದೇನೆ. ಆದ್ರೆ, ಕಳೆದ ಕೆಲವು ದಿನಗಳಿಂದ ಅಧ್ಯಕ್ಷ ಸ್ಥಾನವನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುತ್ತಿದ್ದು, ಇದನ್ನು ಅಂಗೀಕರಿಸಬೇಕೆಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಹಾವೇರಿ ಮೀಸಲು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದ ಎಂ.ಎಂ.ಹಿರೆಮಠ ಅವರು ರುದ್ರಪ್ಪ ಲಮ್ಮಾಣಿಯನ್ನು ಹೊರತುಪಡಿಸಿ ಬೇರೆಯಾರಿಗಾದರೂ ಟಿಕೆಟ್ ಕೊಡಿ ಎಂದು ರಾಜ್ಯ ಕೈ ನಾಯಕರಿಗೆ ಮನವಿ ಮಾಡಿದ್ದರು. ಅಲ್ಲದೇ ಈ ಬಾರಿ ಸ್ಪರ್ಧಿಸುವುದಾಗಿ ಇಂಗಿತ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಬೇಡ ಜಂಗಮ ಜಾತಿ ಪ್ರಮಾಣಪತ್ರವನ್ನು ಸಹ ರೆಡಿ ಮಾಡಿಕೊಂಡಿದ್ದರು. ಆದ್ರೆ, ಹಾವೇರಿ ಕ್ಷೇತ್ರಕ್ಕೆ ಮಾಜಿ ಸಚಿವ ರುದ್ರಪ್ಪ ಲಮಾಣಿ ಹೆಸರು ಘೋಷಣೆ ಮಾಡಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ಹಿರೆಮಠ ಹಾವೇರಿ ಜಿಲ್ಲಾಧ್ಯಕ್ಷ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಇನ್ನು ಕಾಂಗ್ರೆಸ್ಗೆ ಗುಡ್ಬೈ ಹೇಳಿರುವ ಹಿರೆಮಠ ಅವರು ಮುಂದೆ ಬಿಜೆಪಿ ಅಥವಾ ಜೆಡಿಎಸ್ ಸೇರುತ್ತಾರಾ? ಎನ್ನುವುದು ಕಾದುನೋಡಬೇಕಿದೆ.
ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಲಿರುವ ಗುಬ್ಬಿ ಶಾಸಕ ಎಸ್ .ಆರ್ ಶ್ರೀನಿವಾಸ್
ಮಂಡ್ಯದ ಬೆಲ್ಲವನ್ನು ಉಡುಗೊರೆಯಾಗಿ ನೀಡಿದ ಸುಮಲತಾ ಅಂಬರೀಶ್ -ಯಾರಿಗೆ ಗೊತ್ತಾ?
ಯಡಿಯೂರಪ್ಪನವರ ಮನೆ ಮೇಲೆ ಕಲ್ಲು ತೂರಾಟ ಕಾಂಗ್ರೆಸ್ ಕೈವಾಡವಿದೆ. ಸಿಎಂ ಆರೋಪ