Haveri: ಸಂಪೂರ್ಣ ಬರಗಾಲ ಘೋಷಣೆಗೆ ಆಗ್ರಹಿಸಿ ಜೆಡಿಎಸ್ ನಿಂದ ಪ್ರತಿಭಟನೆ

Haveri: ರಾಜ್ಯದ ಹಲವು ತಾಲೂಕುಗಳನ್ನು ಬರಪೀಡಿತ ಎಂದು ಪರಿಗಣಿಸಿಲ್ಲವಾದ್ದರಿಂದ ಅಲ್ಲಿನ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಪಕ್ಷಗಳಲ್ಲದೇ ಖುದ್ದು ಕಾಂಗ್ರೆಸ್ ಶಾಸಕರೇ ತಮ್ಮ ಕ್ಷೇತ್ರವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸದ ಕಾರಣ ರಾಜೀನಾಮೆಗೆ ಮುಂದಾಗಿದ್ದಾರೆ. ಚಡಚಣ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸದ ಕಾರಣ, ಅಸಮಾಧಾನ ವ್ಯಕ್ತಪಡಿಸಿರುವ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.

ಇನ್ನು ಇತ್ತ ಸಂಪೂರ್ಣ ಬರಗಾಲ ಘೋಷಣೆಗೆ ಆಗ್ರಹಿಸಿ ಹಾವೇರಿಯಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕನ್ನ ಸಂಪೂರ್ಣ ಬರಗಾಲ ಘೋಷಣೆಗೆ ಒತ್ತಾಯಿಸಲಾಗಿದೆ.

ರಾಾಜ್ಯದ ಹಲವು ತಾಲೂಕುಗಳನ್ನು ಬರಪೀಡಿತ ತಾಲೂಕೆಂದು ಘೋಷಿಸಲಾಗಿದೆ. ಆದರೆ ಹಾವೇರಿಯ ಹಾನಗಲ್ ತಾಲೂಕನ್ನು ಸಂಪೂರ್ಣವಾಗಿ ಬರಪೀಡಿತ ತಾಲೂಕೆಂದು ಘೋಷಿಸಲಾಗಿಲ್ಲ. ಆದ್ದರಿಂದ ಇಲ್ಲಿನ ಜನರಿಗೆ ಅನ್ಯಾಯವಾಗುತ್ತಿದೆ ಎಂದು ಸರ್ಕಾರದ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾನಗಲ್ ನಗರದ ಕುಮಾರೇಶ್ವರ ಮಠದಿಂದ ತಹಶೀಲ್ದಾರ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕ“ಳ್ಳಲಾಗಿದ್ದು, JDS ತಾಲೂಕ ಘಟಕ ಅಧ್ಯಕ್ಷ ರಾಮನಗೌಡ ಪಾಟೀಲ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.

ತಾಲೂಕಿನಾದ್ಯಂತ ರೈತರ ಮಳೆ ಬೆಳೆ ಇಲ್ಲದೇ ಕಂಗಾಲ ಆಗಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ಸಂಪೂರ್ಣ ಬರಗಾಲ ಅಂತ ಘೋಷಣೆ ಮಾಡಬೇಕು. ಮಾಡದೇ ಹೋದಲ್ಲಿ ರಸ್ತೆ ತಡೆದು ಉಗ್ರ ಹೋರಾಟ ಮಾಡುವುದಾಗಿ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.  ಪ್ರತಿಭಟನೆಯಲ್ಲಿ JDS ಕಾರ್ಯಕರ್ತರು ಹಾಗೂ ರೈತರು ಭಾಗಿಯಾಗಿದ್ದರು.

About The Author