Haveri News: ಹಾನಗಲ್ ತಾಲೂಕಿನ ಗೊಂದಿ ಗ್ರಾಮ ಪಂಚಾಯತಿಯಲ್ಲಿ ಲಕ್ಷಾಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಗಳು ಸೇರಿಕೊಂಡು ಅವ್ಯವಹಾರ ನಡೆಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಆರೋಪದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪಂಚಾಯತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಗಳು ಸೇರಿಕೊಂಡು ಲಕ್ಷಾಂತರ ರೂಪಾಯಿ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪವನ್ನು ಮುಂದಿಟ್ಟುಕೊಂಡು ಸೋಮವಾರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಪಂಚಾಯತಿಯಲ್ಲಿ ನಡೆದಿರುವ ಹಣಕಾಸಿನ ವ್ಯವಹಾರಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಮಗ್ರ ತನಿಖೆ ನಡೆಸಬೇಕು. ಅವ್ಯವಹಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು.
ಅತಿ ಶೀಘ್ರದಲ್ಲಿ ಒಂದು ತನಿಖಾ ತಂಡವನ್ನು ರಚಿಸಿ, ಪಂಚಾಯತಿಯಲ್ಲಿ ನಡೆದಿರುವ ಆರೋಪಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ತನಿಖೆಯಲ್ಲಿ ತಪ್ಪಿತಸ್ಥರು ಕಂಡುಬಂದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.
ಇದೀಗ ಗೊಂದಿ ಗ್ರಾಮ ಪಂಚಾಯತಿಯಲ್ಲಿ ಕೇಳಿಬಂದಿರುವ ಲಕ್ಷಾಂತರ ರೂಪಾಯಿ ಅವ್ಯವಹಾರದ ಆರೋಪದ ಸತ್ಯಾಸತ್ಯತೆ ತನಿಖೆಯಿಂದ ಹೊರಬರಬೇಕಿದೆ. ಅಧಿಕಾರಿಗಳು ಕೈಗೊಳ್ಳಲಿರುವ ಮುಂದಿನ ಕ್ರಮದತ್ತ ಗ್ರಾಮಸ್ಥರು ಎದುರು ನೋಡುತ್ತಿದ್ದಾರೆ.




