Haveri News: ಹಾನಗಲ್: ತಾಲೂಕಿನ ಯಳವಟ್ಟಿ ಗ್ರಾಮದ ಒಳಭಾಗದಲ್ಲಿ ಹಾದುಹೋಗುವ ಕೆರೆ ಏರಿ ರಸ್ತೆಯು ರಸ್ತೆ ಮತ್ತೆ ಹಾಳಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಈ ರಸ್ತೆಯಲ್ಲಿ ಈಗಾಗಲೇ ಎರಡು ಬಾರಿ ಕಾಮಗಾರಿ ನಡೆಸಿದ್ದರೂ, ಅಲ್ಲಲ್ಲಿ ಮತ್ತೆ ದೊಡ್ಡ ಗುಂಡಿಗಳು ಬಿದ್ದಿವೆ. ಇದರಿಂದ ವಾಹನ ಸವಾರರು ಹಾಗೂ ಗ್ರಾಮಸ್ಥರು ಸಂಚರಿಸಲು ಪರದಾಡುವಂತಾಗಿದೆ.
ಇದರ ಜೊತೆಗೆ ಕೆರೆ ಏರಿ ರಸ್ತೆಗೆ ಹೊಂದಿಕೊಂಡಿರುವ ಮತ್ತೊಂದು ರಸ್ತೆಯನ್ನು ಕೆಲವೇ ತಿಂಗಳ ಹಿಂದೆ ಡಾಂಬರೀಕರಣ ಮಾಡಲಾಗಿತ್ತು. ಆದರೆ ಇದೀಗ ಡಾಂಬರು ಅಲ್ಲಲ್ಲಿ ಕಿತ್ತು ಹೋಗಿದ್ದು, ಕಾಮಗಾರಿ ಕಳಪೆಯಾಗಿರುವುದಕ್ಕೆ ಇದು ಸಾಕ್ಷಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಕಳಪೆ ಕಾಮಗಾರಿ ನಡೆಸಿದ ಗುತ್ತಿಗೆದಾರರು ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು, ರಸ್ತೆ ಗುಣಮಟ್ಟದ ಕಾಮಗಾರಿ ನಡೆಸಬೇಕು. ಗುಂಡಿಗಳನ್ನು ಮುಚ್ಚಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಕಳಪೆ ಕಾಮಗಾರಿ ಆರೋಪದ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.




