Haveri News: ಡಾ.ಬಿ.ಆರ್.ಅಂಬೇಡ್ಕರ್-ಜಗಜೀವನ್‌ರಾಮ್ ಜಯಂತ್ಯೋತ್ಸವ ಅದ್ಧೂರಿ ಆಚರಣೆ..

Haveri News: ಹಾವೇರಿ: ಹಾನಗಲ: ಪಟ್ಟಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಮ್ ಅವರ ಜಯಂತ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಮತ್ತು ಹಾನಗಲ್ ಪುರಸಭೆಗಳ ಸಂಯುಕ್ತಾಶ್ರಯದಲ್ಲಿ ನಗರದ ಬಾಬು ಜಗಜೀವನರಾಮ್ ಭವನದಲ್ಲಿ ಆಯೋಜನೆ ಮಾಡಲಾಗಿತ್ತು.

ಈ ವೇಳೆ ತಾಲೂಕು ಪಂಚಾಯಿತಿ ಕಾರ್ಯಾಲಯದ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಡಾ. ಬಿ ಆರ್ ಅಂಬೇಡ್ಕರ್ ಭಾವಚಿತ್ರದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಜಾನಪದ ಕಲಾ ಡೊಳ್ಳು ತಂಡಗಳ ಸಾರಥ್ಯದಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು.

ಹಾನಗಲ್ ತಹಶೀಲ್ದಾರ್ ರೇಣುಕಮ್ಮ ಅವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು.

ಬಳಿಕ ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ, ಅಂಬೇಡ್ಕರ್ ಅವರ ಜೀವನ ಸಾದನೆಗಳು, ಸಮಾಜಕ್ಕೆ ಅವರು ನೀಡಿದ ಜೀವನ ಸಾಧನೆಗಳು, ಸಮಾಜಕ್ಕೆ ಅವರು ನೀಡಿದ ಮಹತ್ವದ ಕೊಡುಗೆ, ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಸಂವಿಧಾನದ ಮಹತ್ವವನ್ನು ಸಾರಿದ ಅವರ ಚಿಂತನೆಗಳನ್ನು ಸ್ಮರಿಸಲಾಯಿತು.

ಈ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅನೇಕ ಸಮಾಜಮುಖಿ ನಾಯಕರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿದ್ದರು.

About The Author