Haveri News: ಶೈಕ್ಷಣಿಕ ಹೋರಾಟ ಸಮಿತಿಯ ಉಪವಾಸ ಸತ್ಯಾಗ್ರಹ: ಶ್ರೀನಿವಾಸ ಮಾನೆ ಭಾಗಿ

Haveri News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಶೈಕ್ಷಣಿಕ ವ್ಯವಸ್ಥೆಯ ಲೋಪ ವಿರೋಧಿಸಿ, ಶಿಕ್ಷಣ ತಜ್ಞ ಸೋನಮ್‌ ವಾಂಗ್ಚುಕ್ ಅವರ ಆಮರಣ ಉಪವಾಸ ಸತ್ಯಾಗ್ರಹ ಬೆಂಬಲಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಇಂದು ಹಾನಗಲ್ ನಗರದಲ್ಲಿ ತಾಲೂಕಾ ಶೈಕ್ಷಣಿಕ ಹೋರಾಟ ಸಮಿತಿ ನಡೆಸಿದ ಉಪವಾಸ ಸತ್ಯಾಗ್ರಹದಲ್ಲಿ ಶಾಸಕರಾದ  ಶ್ರೀನಿವಾಸ ಮಾನೆ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. 21 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದರ ಜವಾಬ್ದಾರಿ ಹೊತ್ತ ದೇಶದ ಶಿಕ್ಷಣ ಸಚಿವರ ತಲೆದಂಡವಾಗಬೇಕು. ವಿದ್ಯಾರ್ಥಿಗಳಿಗೆ ನ್ಯಾಯ ಸಿಗಬೇಕು ಎಂದರು.

About The Author