Haveri News: ಹಾವೇರಿ: ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಶ್ರೀನಿವಾಸ ಮಾನೆ ಅವರು ಭಾನುವಾರ ಹಾನಗಲ್ ತಾಲೂಕ್ ಆಸ್ಪತ್ರೆಯಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.
ಪೋಲಿಯೋ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಪೋಲಿಯೋ ನಿರ್ಮೂಲನೆಗೆ ಸರ್ಕಾರ ನಿರಂತರವಾಗಿ ವಿಶೇಷ ಅಭಿಯಾನಗಳನ್ನು ಹಮ್ಮಿಕೊಳ್ಳುತ್ತಿದ್ದು ಯಾವುದೇ ಮಗು ಲಸಿಕೆಯಿಂದ ವಂಚಿತರಾಗಬಾರದು ಪಾಲಕರು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಿ 5 ವರ್ಷದೊಳಗಿನ ಪ್ರತಿಯೊಬ್ಬ ಮಗುವಿಗೂ ತಪ್ಪದೆ ಎರಡು ಹನಿ ಲಸಿಕೆ ಹಾಕಿಸಬೇಕು.
ಆರೋಗ್ಯವಂತ ಮಕ್ಕಳೇ ದೇಶದ ಭವಿಷ್ಯವಾಗಿದ್ದು ಮಕ್ಕಳ ಆರೋಗ್ಯ ರಕ್ಷಣೆಗೆ ಎಲ್ಲರ ಆದ್ಯತೆ ನೀಡಬೇಕು ಎಂದು ಹೇಳಿದರು.




