Haveri News: ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

Haveri News: ಜಿಲ್ಲೆಯಾದ್ಯಂತ ಖಾಸಗಿ ಮೈಕ್ರೋ ಫೈನಾನ್ಸ್ ಹಾವಳಿ ಹಾಗೂ ಕಿರುಕುಳ ಖಂಡಿಸಿ ನಗರದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದೆ.

ರಾಣೇಬೆನ್ನೂರ ನಗರದಲ್ಲಿ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿ ನಾಯಿ ಕೊಡೆಯಂತೆ ಮೈಕ್ರೋ ಫೈನಾನ್ಸ್ ಗಳು ತಲೆ ಎತ್ತಿ, ಹೆಚ್ಚಿನ‌ ಬಡ್ಡಿ ವಸೂಲಿ ಮಾಡುತ್ತಿವೆ. ಅಲ್ಲದೆ ಸಮಯದ ನಿಯಮಾವಳಿಗಳನ್ನು ಮೀರಿ ರೈತರಿಗೆ ಕೂಲಿ ಕಾರ್ಮಿಕರಿಗೆ ಕಿರುಕುಳ ನೀಡುತ್ತಿವೆ ಎಂದು ರೈತ ಸಂಘದ ಮುಖಂಡ ಹನುಮಂತಪ್ಪ ಕಬ್ಬಾರ ಆಕ್ರೋಶ ವ್ಯಕ್ತಪಡಿಸಿದರು.

ಬಡವರು, ಆರ್ಥಿಕವಾಗಿ ಹಿಂದುಳಿದವರು ಮತ್ತು ರೈತರು ಮೈಕ್ರೋ ಫೈನಾನ್ಸ್ ನಲ್ಲಿ ಸಾಲ‌ಮಾಡಿದ್ದಾರೆ ಆದರೆ ಈಗ ಬರಗಾಲವಿದೆ ಹೀಗಿರುವಾಗ ರೈತರು ಹೇಗೆ ಸಾಲವನ್ನು ಕಟ್ಟಬೇಕು ಎಂದು ಕಬ್ವಾರ ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಒಂದು ಲಕ್ಷ ರೂ ಒಳಗೆ ಇರುವ ಸಾಲವನ್ನು ಮನ್ನಾ ಮಾಡಬೇಕು, ರೈತರಿಗೆ ನೀಡುವ ಕಿರುಕುಳವನ್ನು ತಪ್ಪಿಸಬೇಕು ಇಲ್ಲವಾದರೆ ಖಾಸಗಿ ಮೈಕ್ರೋ ಫೈನಾನ್ಸ್ ಬಳಿ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಈ ಬಗ್ಗೆ ರಾಣೇಬೆನ್ನೂರ ನಗರದಲ್ಲಿ ಇಂದು ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿ ತಹಶಿಲ್ದಾರರ ಮೂಲಕ ಪ್ರತಿಭಟನಾಕಾರರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಮನವಿ ಸಲ್ಲಿಸಿದ .

About The Author