ಹಾವೇರಿ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಹಾವೇರಿ: ಬಸವನಕಟ್ಟಿ 110ಕೆ.ವ್ಹಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸೆಪ್ಟೆಂಬರ್ 6 ರಂದು ಮಂಗಳವಾರ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಅಂದು ಬಸವನಕಟ್ಟಿ 110 ಕೆ.ವ್ಹಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಹಾಗೂ ಗಾಂಧೀಪುರ 33 ಕೆ.ವ್ಹಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಕರ್ಜಗಿ ಎಕ್ಸಪ್ರೆಸ್ ಫೀಡರ್‍ಗಳಲ್ಲಿ ಬೆಳಿಗ್ಗೆ 10 ರಿಂದ ಸಾಯಂಕಾಲ 6 ಗಂಟೆ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುವುದು.

ಈ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೆ ಬರುವ ಬಸವನಕಟ್ಟಿ, ಸೋಮನಕಟ್ಟಿ, ಮಾಚಾಪುರ, ಬೂದಗಟ್ಟಿ, ಕನವಳ್ಳಿ, ಹನುಮನಹಳ್ಳಿ, ಕಾಟೇನಹಳ್ಳಿ, ಅಗಡಿ, ತಿಮ್ಮೇನಹಳ್ಳಿ, ಮಾಳಾಪುರ, ಗಾಂಧಿಪುರ, ಜಾನಕೊಪ್ಪ, ಕರ್ಜಗಿ ಹಾಗೂ ಎತ್ತಿನಹಳ್ಳಿ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಹೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author