ಚಾಮರಾಜಪೇಟೆ ಆಟದ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಹೈಕೋರ್ಟ್ ಅನುಮತಿ

ಬೆಂಗಳೂರು: ನಗರದ ಚಾಮರಾಜಪೇಟೆಯಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಕೂರಿಸೋದಕ್ಕೆ ಕರ್ನಾಟಕ ಹೈಕೋರ್ಟ್, ಇಂದು ಗ್ರೀನ್ ಸಿಗ್ನಲ್ ನೀಡಿದೆ.

ಈ ಸಂಬಂಧ ರಾಜ್ಯ ಸರ್ಕಾರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು, ಈದ್ಗಾ ಮೈದಾನದಲ್ಲಿ ಧಾರ್ಮಿಕ ಆಚರಣೆಗೆ ಅನುಮತಿ ನೀಡೋ ಮುನ್ನ ಸಲ್ಲಿಸೋ ಅರ್ಜಿಯನ್ನು ಪರಿಶೀಲಿಸಬೇಕು. ಸಲ್ಲಿಸಲಾಗಿರುವಂತ ಅರ್ಜಿಗಳನ್ನು ಪರಿಶೀಲಿಸಿದ ನಂತ್ರ, ಅನುಮತಿ ನೀಡಬಹುದು ಎಂದು ಸೂಚಿಸಿದೆ.

ಇನ್ನೂ ಆಗಸ್ಟ್ 31ರಂದು ನಿರ್ಧಿಷ್ಟ ಅವಧಿಯವರೆಗೆ ಚಾಮರಾಜಪೇಟೆಯ ಆಟದ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಕೂರಿಸಬಹುದು ಎಂಬುದಾಗಿ ತಿಳಿಸಿ, ಕರ್ನಾಟಕ ಹೈಕೋರ್ಟ್ ಚಾಮರಾಜಪೇಟೆ ಆಟದ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಗ್ರೀನ್ ಸಿಗ್ನಲ್ ನೀಡಿದೆ.

About The Author