Sunday, December 22, 2024

Latest Posts

ಸೋನಿಯಾ ಗಾಂಧಿ ಮನವಿಗೆ ಮಣಿದ ಹೆಚ್ಡಿಡಿ: ರಾಜ್ಯ ಸಭೆ ಚುನಾವಣೆಗೆ ನಿಲ್ಲಲು ನಿರ್ಧಾರ

- Advertisement -

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮನವಿಗೆ ಮಣಿದು ರಾಜ್ಯ ಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿಯ ಮೇರೆಗೆ ಮಾಜಿ ಪ್ರಧಾನಿ ದೇವೇಗೌಡರು, ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ನಾಳೆ ಅವರು ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡುವರು. ಎಲ್ಲರ ಒಮ್ಮತದ ಅಭಿಪ್ರಾಯಕ್ಕೆ ಸಮ್ಮತಿಸಿದ ದೇವೇಗೌಡರಿಗೆ ಧನ್ಯವಾದಗಳು ಎಂದಿದ್ದಾರೆ.

ಅಲ್ಲದೇ, ರಾಜಕೀಯದಲ್ಲಿ ಜನರಿಂದಲೇ ಗೆಲುವು ಸೋಲುಗಳನ್ನು ಕಂಡಿರುವ, ಜನರಿಂದಲೇ ದೇಶದ ಅತ್ಯುನ್ನತ ಸ್ಥಾನಕ್ಕೇರಿದ್ದ ಜನನಾಯಕ ದೇವೇಗೌಡರನ್ನು ರಾಜ್ಯಸಭೆ ಪ್ರವೇಶಿಸುವಂತೆ ಮನವೊಲಿಸುವುದು ಸುಲಭದ ಕೆಲಸವಾಗಿರಲಿಲ್ಲ. ಆದರೆ ಎಲ್ಲರ ಆಶೋತ್ತರಗಳಿಗೆ ಪ್ರೀತಿಪೂರ್ವಕವಾಗಿ ಮಣಿದಿದ್ದಾರೆ. ರಾಜ್ಯಸಭೆಯಲ್ಲಿ ದೇವೇಗೌಡರು ರಾಜ್ಯದ ಅಗ್ರ ಪ್ರತಿನಿಧಿಯಾಗಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಮೊದಲು ಮಾತನಾಡಿದ್ದ ಕುಮಾರಸ್ವಾಮಿ, ಇಂದಿನ ಸಂಕಷ್ಟದ ಸ್ಥಿತಿಯಲ್ಲಿ ದೇಶಕ್ಕೆ ದೇವೇಗೌಡ ಅವರಂತಹ ಅವಶ್ಯಕತೆ ಇದೆ. ನಾಲ್ಕನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಂಬಂಧ ಕಾಂಗ್ರೆಸ್‌ ಪಕ್ಷ ನಮ್ಮ ಜತೆ ಚರ್ಚೆ ನಡೆಸಿಲ್ಲ. ದೇವೇಗೌಡರಿಗೆ ಎಲ್ಲ ಪಕ್ಷಗಳೂ ಬೆಂಬಲಿಸುತ್ತವೆ’ ಎಂಬುದಾಗಿ ಹೇಳಿದ್ದರು.

ರಾಜ್ಯಸಭೆಗೆ ಆಯ್ಕೆ ಆಗಲು 48 ಮತಗಳು ಬೇಕು. ಜೆಡಿಎಸ್ ಬಳಿ 34 ಮತಗಳಿವೆ. ದೇವೇಗೌಡರು ಸ್ಪರ್ಧೆ ಮಾಡಿದರೆ ಬೇಕಾದ 14 ಮತಗಳನ್ನು ಕಾಂಗ್ರೆಸ್​ ನೀಡುವ ಸಾಧ್ಯತೆ ಇದೆ ಎಂದಿದ್ದರು.

https://youtu.be/uQobu3qtHQk
- Advertisement -

Latest Posts

Don't Miss