ಸಿದ್ದರಾಮಯ್ಯ ವಿರುದ್ಧ ಆಚಾರಗೆಟ್ಟ ಮುಖ್ಯಮಂತ್ರಿ ಎಂದು ಆಕ್ರೋಶ ಹೊರಹಾಕಿದ ಹೆಚ್.ಡಿ.ಕುಮಾರಸ್ವಾಮಿ

Political News: ಸಿಎಂ ಸಿದ್ದರಾಮಯ್ಯ ಭಾಷಣ ಮಾಡುವ ವೇಳೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದಾರೆ. ಅವಳನ್ನು ಎಂಬ ಪದ ಸಂಭೋದನೆ ಮಾಡಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿ, ಹರಿಹಾಯ್ದಿದ್ದು, ಆಚಾರಗೆಟ್ಟ ಮುಖ್ಯಮಂತ್ರಿ ಎಂದು ಆಕ್ರೋಶ ಹೊರಹಾಕಿದ್ದಾರೆ.

ಮಾತೆತ್ತಿದರೆ ಸಂವಿಧಾನ, ಪ್ರಜಾಪ್ರಭುತ್ವ, ವಕೀಲಿಕೆ ನಮ್ಮಪ್ಪನ ಮನೆ ಆಸ್ತಿ ಎಂದು ಜಾಗಟೆ ಹೊಡೆಯುವ ಸಿದ್ದರಾಮಯ್ಯನವರು ಮಾನ, ಮರ್ಯಾದೆ, ಮಹಿಳೆಯರ ಮೇಲೆ ಗೌರವ ಏನಾದರೂ ಇಟ್ಟುಕೊಂಡಿದ್ದರೆ, ಈ ಕ್ಷಣದಲ್ಲಿಯೇ ಸಿಎಂ ಕುರ್ಚಿಯನ್ನು ಖಾಲಿ ಮಾಡಬೇಕು ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ನಿನ್ನೆಯ ದಿನ ಚಾಮರಾಜನಗರದಲ್ಲಿ ಇದೇ ಸಿದ್ದರಾಮಯ್ಯನವರ ಸುಪುತ್ರ ಯತೀಂದ್ರ ಭಾಷಣ ಮಾಡುತ್ತಿದ್ದಾಗ ಯಾರೋ ಒಬ್ಬರು ಏಕವಚನದಲ್ಲಿ ಪ್ರಶ್ನಿಸಿದರೆಂಬ ಕಾರಣಕ್ಕೆ ಪೊಲೀಸರು ಆತನನ್ನು ಅಟ್ಟಾಡಿಸಿಕೊಂಡು ಹೋಗಿ ಬಂಧಿಸಿ ದರದರನೇ ಎಳೆದುಕೊಂಡು ಹೋದರು. ಹಾಗಿದ್ದರೆ, ರಾಷ್ಟ್ರಪತಿಗಳನ್ನೇ ಏಕವಚನದಲ್ಲಿ ಸಂಬೋಧಿಸಿದ ಈ ಮುಖ್ಯಮಂತ್ರಿಗೇನು ಶಿಕ್ಷೆ?

ವಕೀಲರಂತೆ, ಸ್ವಯಂಘೋಷಿತ ಸಂವಿಧಾನ ತಜ್ಞರಂತೆ.. ನಾಚಿಕೆಯಾಗಬೇಕು ಇವರಿಗೆ. ಸಾರ್ವಜನಿಕ ವೇದಿಕೆಯಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಮುಖ್ಯಮಂತ್ರಿಯೊಬ್ಬರು ಸಂಬೋಧಿಸುವ ರೀತಿಯೇ ಇದು. ಸಿದ್ದರಾಮಯ್ಯನವರ ನಡವಳಿಕೆ ಕರ್ನಾಟಕಕ್ಕೆ ಅಂಟಿದ ಅಳಿಸಲಾಗದ ಕಳಂಕ. ಅವರ ಈ ಕೀಳುಮಾತು ದೇಶಕ್ಕೆ, ಸಂವಿಧಾನಕ್ಕೆ ಆಗಿರುವ ಘೋರ ಅಪಚಾರ ಎಂದು ಹೆಚ್ಡಿಕೆ ಅಸಮಾಧಾನ ಹೊರಹಾಕಿದ್ದಾರೆ.

ಆಚಾರವಿಲ್ಲದ ನಾಲಿಗೆ, ನಿನ್ನ ನೀಚಬುದ್ಧಿಯ ಬಿಡು ನಾಲಿಗೆ ಎಂದು ದಾಸರು ಹೇಳಿದ್ದಾರೆ. ಸಿದ್ದರಾಮಯ್ಯಗೆ ಆಚಾರ ಹತ್ತಿರಕ್ಕೂ ಸುಳಿಯದ ವಿಚಾರ. ಶೋಷಿತ ಬುಡಕಟ್ಟು ಸಮುದಾಯದಿಂದ ಬಂದ ದೇಶದ ಮೊತ್ತ ಮೊದಲ ರಾಷ್ಟ್ರಪತಿಗಳು, ಅದರಲ್ಲಿಯೂ ಮಹಿಳೆ.. ಶೋಷಿತರ ಜಾಗೃತಿ ಸಮಾವೇಶದಲ್ಲೇ ಅವರಿಗೆ ಮುಖ್ಯಮಂತ್ರಿ ಅಪಮಾನ ಎಸಗಿದ್ದಾರೆ.

ಡೋಂಗೀ ಪ್ರಜಾಪ್ರಭುತ್ವವಾದಿಯ ಅಸಲಿ ಮುಖ ಕಳಚಿಬಿದ್ದಿದೆ. ಒಂದು ಕ್ಷಣವೂ ಮುಖ್ಯಮಂತ್ರಿ ಪದವಿಯಲ್ಲಿ ಇರಲು ಅವರು ಅರ್ಹರಲ್ಲ. ಕೂಡಲೇ ತಾವೆಸಗಿರುವ ಅಪಚಾರಕ್ಕೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಅಥವಾ ಮಾನ್ಯ ರಾಜ್ಯಪಾಲರೇ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕಿತ್ತೆಸೆಯಬೇಕು. ಇದು ನನ್ನ ಆಗ್ರಹ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಗೌರವಾನ್ವಿತ ರಾಷ್ಟ್ರಪತಿಗಳು, ದೇಶದ ಪ್ರಥಮ ಪ್ರಜೆ ಆಗಿರುವ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ (ಆ ಪದವನ್ನು ಬರೆಯಲಾರೆ) ಎಂದು ತುಚ್ಛವಾಗಿ ಸಂಬೋಧಿಸಿದ ಕೀಳು, ವಿಕೃತ, ಹೀನ ನಾಲಗೆಯ ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೂಡಲೇ ವಜಾ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿ, ಕುಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

‘ನಾವು ಬಿಹಾರಕ್ಕೆ ಹೋಗೋದು‌ ಬೇಡಾ, ಹುಬ್ಬಳ್ಳಿ ಧಾರವಾಡದಲ್ಲಿ ಮತ್ತೊಬ್ಬ ನೀತಿಶ್ ಕುಮಾರ್ ಹುಟ್ಟಿದ್ದಾರೆ’.

ಏಕಾಏಕಿ ಹನುಮಧ್ವಜ ಕೆಳಗಿಳಿಸಿ, ರಾಮನ ಬ್ಯಾನರ್ ಕಿತ್ತು ಹಾಕಿರುವುದು ಸರಿಯಾದ ಕ್ರಮವಲ್ಲ: ಸಂಸದೆ ಸುಮಲತಾ

ಕೇಂದ್ರದಿಂದ ಐಟಿ-ಇಡಿ ಬೆದರಿಕೆ ಇದ್ದಿದ್ದರೆ 9 ತಿಂಗಳ ಹಿಂದೆ ಮಾಡಬೇಕಿತ್ತು: ಜಗದೀಶ್ ಶೆಟ್ಟರ್

About The Author