Saturday, March 2, 2024

Latest Posts

‘ಮೈತ್ರಿ ಮುಂದುವರಿಸೋ ಬಗ್ಗೆ ಗೊತ್ತಿಲ್ಲ’- ಕುಮಾರಸ್ವಾಮಿ

- Advertisement -

ಬೆಂಗಳೂರು: ಸಮ್ಮಿಶ್ರ ಸರ್ಕಾರ ಪತನವಾದ ಬೆನ್ನಲ್ಲೇ ಇದೀಗ ದೋಸ್ತಿಗಳಿಗೆ ಮೈತ್ರಿ ಮುಂದುವರಿಸಬೇಕೋ ಬೇಡವೋ ಎನ್ನುವ ಪ್ರಶ್ನೆ ಎದುರಾಗಿದೆ. ಇನ್ನು ಮೈತ್ರಿ ಮುಂದುವರಿಸುವ ಬಗ್ಗೆ ಕಾಂಗ್ರೆಸ್ ನಾಯಕರು ಯಾವ ನಿರ್ಧಾರ ಕೈಗೊಳ್ಳುತ್ತಾರೋ ಗೊತ್ತಿಲ್ಲ ಅಂತ ನಿರ್ಗಮಿತ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದ ಬಳಿ ಮಾತನಾಡಿದ ನಿರ್ಗಮಿತ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷದ ಜೊತೆ ಮಾತ್ರಿ ಮುಂದುವರಿಸಬೇಕೋ ಎನ್ನುವ ಬಗ್ಗೆ ನನಗೆ ಗೊತ್ತಿಲ್ಲ. ಈ ಬಗ್ಗೆ ಕಾಂಗ್ರೆಸ್ ನಾಯಕರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಅನ್ನೋದು ಗೊತ್ತಿಲ್ಲ. ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಲು ಇದೀಗ ಜೆಡಿಎಲ್ ಪಿ ಸಭೆ ನಡೆಸಲಾಗಿದೆ. ಈ ಕುರಿತು ಶಾಸಕರೊಂದಿಗೆ ಚರ್ಚೆ ಮಾಡುತ್ತೇನೆ ಅಂತ ಕುಮಾರಸ್ವಾಮಿ ಹೇಳಿದ್ದಾರೆ.

ಇನ್ನು ಇಂದಿನ ಸಭೆಯಲ್ಲಿ ಜೆಡಿಎಸ್ ಗೆ ಕೈಕೊಟ್ಟು ರಾಜೀನಾಮೆ ನೀಡಿರುವ ಮೂವರು ಅತೃಪ್ತ ಶಾಸಕರಾದ ಕೆ.ಆರ್ ಪೇಟೆ ಶಾಸಕ ನಾರಾಯಣಸ್ವಾಮಿ, ಹುಣಸೂರು ಶಾಸಕ ಎಚ್.ವಿಶ್ವನಾಥ್ ಹಾಗೂ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯರಿಗೆ ಪರ್ಯಾಯ ನಾಯಕನನ್ನು ಹುಟ್ಟಿಹಾಕುವ ಸಲುವಾಗಿಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ. ಅಲ್ಲದೆ ಮುಂದೆ ಉಪ ಚುನಾವಣೆ ಎದುರಾದರೆ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಬೇಕೋ ಬೇಡವೋ ಎನ್ನುವ ಕುರಿತು ಸಹಾ ಚರ್ಚೆ ಸಾಧ್ಯತೆ ಇದೆ.

- Advertisement -

Latest Posts

Don't Miss