Sunday, May 19, 2024

Latest Posts

ಹೆಚ್.ಡಿ.ಕುಮಾರಸ್ವಾಮಿ ಸೋಲು ಕಟ್ಟಿಟ್ಟ ಬುತ್ತಿ: ಸಕ್ಕರೆ ನಾಡಿನ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

- Advertisement -

Political News: ಇಂದು ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು.

ಇದೇ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದೂ ಅಷ್ಟೇ ಸತ್ಯ. ಕುಮಾರಸ್ವಾಮಿ ಅವರು ರಾಮನಗರ ಜಿಲ್ಲೆ ಶಾಸಕರು. ಅವರು ಅಲ್ಲೇ ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಬಹುದಿತ್ತು. ಆದರೆ ಸೋಲಿನ ಭಯದಿಂದ ಇಲ್ಲಿಗೆ ಬಂದು ಎನ್.ಡಿ.ಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ನಮ್ಮ ಈ ಕಾರ್ಯಕ್ರಮಕ್ಕೆ ವ್ಯಕ್ತವಾಗಿರುವ ಅಭೂತಪೂರ್ವ ಸ್ಪಂದನೆಯೇ ಅವರನ್ನು ಸೋಲಿಸಲು ಮಂಡ್ಯ ಜಿಲ್ಲೆಯ ಜನತೆ ನಿರ್ಧರಿಸಿದ್ದಾರೆ ಎಂಬುದನ್ನು ಹೇಳುತ್ತದೆ. ಹೀಗಾಗಿ ಹೆಚ್.ಡಿ.ಕುಮಾರಸ್ವಾಮಿ ಸೋಲು ಕಟ್ಟಿಟ್ಟ ಬುತ್ತಿ ಎಂದು ಸಿಎಂ ಹೇಳಿದ್ದಾರೆ.

ನರೇಂದ್ರ ಮೋದಿ ಅವರ ಅಚ್ಚೇ ದಿನ್ 10 ವರ್ಷ ಕಳೆದರೂ ಭಾರತೀಯರಿಗೆ ಬಂದಿಲ್ಲ. ರಾಜ್ಯದ ಜನತೆಗೆ ಅಚ್ಚೇ ದಿನ್ ಕಾಣಿಸಿಯೇ ಇಲ್ಲ. ಮೋದಿಯವರ ಕಾರಣದಿಂದ ಏರಿಕೆಯಾಗಿದ್ದ ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ, ಬೇಳೆ-ಕಾಳು, ಅಡುಗೆ ಎಣ್ಣೆ ಸೇರಿ ಎಲ್ಲದರ ಬೆಲೆ ಏರಿಕೆ ನೀತಿಯಿಂದ ಹೈರಾಣಾಗಿದ್ದ ರಾಜ್ಯದ ಜನರ ಬದುಕಿನ‌ ಕಷ್ಟಗಳಿಗೆ ಸ್ಪಂದಿಸುವ ಉದ್ದೇಶದಿಂದ ನಾವು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಇದರಿಂದ ರಾಜ್ಯದ ಪ್ರತಿ ಕುಟುಂಬಗಳಿಗೆ ಪ್ರತಿ ತಿಂಗಳು 5 ರಿಂದ 6 ಸಾವಿರ ರೂಪಾಯಿ ಒದಗಿ ಬರುವಂತಹ ನೆರವಿನ ಕಾರ್ಯಕ್ರಮಗಳನ್ನು ನೀಡಿದ್ದೇವೆ. ರಾಜ್ಯದ ಜನರಿಗೆ ಅನ್ನಭಾಗ್ಯದ ಅಕ್ಕಿ ಕೊಡದಂತೆ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರ ತೊಂದರೆ ಕೊಟ್ಟರೂ ಕೂಡ ನಾವು ಅಕ್ಕಿ ಜೊತೆಗೆ ಹಣವನ್ನೂ ನಮ್ಮ ಜನರ ಬದುಕಿಗೆ ಕೊಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೊಟ್ಟ ಮಾತಿನಂತೆ ನಡೆದುಕೊಂಡವರು ಯಾರು ಎನ್ನುವುದನ್ನು ನಿಮ್ಮ ಹೃದಯಕ್ಕೆ ಕೇಳಿಕೊಳ್ಳಿ. ಅವರಿಗೆ ಮಾತ್ರ ನಿಮ್ಮ ಮತ ನೀಡಿ. ರಾಜ್ಯದಲ್ಲಿ ಬಿಜೆಪಿ ಪಕ್ಷದಿಂದ ಗೆದ್ದ 27 ಸಂಸದರು ರಾಜ್ಯದ ಸಮಸ್ಯೆಗಳ ಬಗ್ಗೆ ನೆಪಮಾತ್ರಕ್ಕೂ ಧ್ವನಿ ಎತ್ತದೆ ರಾಜ್ಯದ ಜನರಿಂದ ಪಡೆದ ಮತಕ್ಕೆ ಅವಮಾನ ಮಾಡಿದರು. ಈ ಅವಮಾನಕ್ಕೆ ತಕ್ಕ ಉತ್ತರ ನೀಡಿ ರಾಜ್ಯದ ಜನತೆಯ ಪರವಾಗಿ ಧ್ವನಿ ಎತ್ತುವ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ, ಮಂಡ್ಯ ಜನತೆಯ ಸ್ವಾಭಿಮಾನದ ತಾಕತ್ತನ್ನು ತೋರಿಸಿ ಎಂದು ಮನವಿ ಮಾಡುತ್ತೇನೆ. ಭಾರತೀಯರ ಭಾವನೆಗಳನ್ನು ಭಾವನಾತ್ಮಕವಾಗಿ ಕೆರಳಿಸಿ, ನಮ್ಮ ಬದುಕಿಗೆ ವಂಚಿಸುವವರಿಗೆ ಮಾನ್ಯತೆ ಕೊಡಬೇಡಿ. ಜನರ ಕಷ್ಟಗಳಿಗೆ ಸ್ಪಂದಿಸುವ ನಮಗೆ ಶಕ್ತಿ ಕೊಡಿ. ನೀವು ಕೊಟ್ಟ ಶಕ್ತಿ ನಿಮ್ಮ ಮನೆ ಬಾಗಿಲಿಗೇ ಉತ್ತಮ ಕಾರ್ಯಕ್ರಮಗಳ ರೂಪದಲ್ಲಿ ವಾಪಾಸ್ ಬರುತ್ತದೆ ಎಂದು ಸಿಎಂ ಸಿದ್ದರಾಮಯಯ್ ಹೇಳಿದರು.

ಮತದಾರರಿಗೆ ಹಂಚಲು ತಂದಿದ್ದ 18 ಕೋಟಿ ರೂಪಾಯಿ ವಶಕ್ಕೆ ಪಡೆದ ಚುನಾವಣಾಧಿಕಾರಿಗಳು

ಅವರು ಬಂದಿದ್ದು ಗೊತ್ತಾಗಲ್ಲ, ಹೋಗಿದ್ದು ಗೊತ್ತಾಗಲ್ಲ: ರಾಹುಲ್ ರಾಜ್ಯ ಪ್ರವಾಸದ ಬಗ್ಗೆ ಪ್ರಜ್ವಲ್ ಮಾತು

ಬರ್ತ್‌ಡೇ ಪಾರ್ಟಿಗಾಗಿ ಜೋಮೆಟೋ ಪರಿಚಯಿಸಿದೆ ಹೊಸ ಆರ್ಡರ್ ಫ್ಲೀಟ್

- Advertisement -

Latest Posts

Don't Miss