- Advertisement -
ಬೆಂಗಳೂರು: ನಮ್ಮ ಸಾಮರ್ಥ್ಯಕ್ಕನುಸಾರ ಏಳು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದೇವೆ. ಎಲ್ಲೆಲ್ಲಿ ಗೆಲುವಿಗೆ ಅವಕಾಶವಿದೆಯೂ ಅಲ್ಲಿ ಸ್ಪರ್ಧೆ ಮಾಡಲಾಗಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯ- ಅಪ್ಪಾಜಿಗೌಡ , ತುಮಕೂರು- ಅನಿಲ್ ಕುಮಾರ್, ಮೈಸೂರು- ಸಿ.ಎನ್.ಮಂಜೇಗೌಡ, ಕೋಲಾರ- ವಕ್ಕಲೇರಿ ರಾಮು,. ಬೆಂಗಳೂರು ಗ್ರಾಮಾಂತರ- ಹೆಚ್.ಎಂ.ರಮೇಶ್ ಗೌಡ
ಕೊಡಗು-ಹೆಚ್.ಯು.ಇಸಾಕ್ ಖಾನ್, ಹಾಸನ- ಸೂರಜ್ ರೇವಣ್ಣ ಸ್ಪರ್ಧೆ ಮಾಡಿದ್ದಾರೆ.
ಸ್ಪರ್ಧೆ ಮಾಡದ ಕ್ಷೇತ್ರಗಳಲ್ಲಿ ಸ್ಥಳೀಯ ನಾಯಕರು ಪರಿಸ್ಥಿತಿಗೆ ಅನುಗುಣವಾಗಿ ತೀರ್ಮಾನ ಮಾಡ್ತಾರೆ. ನನ್ನ ಗುರಿ ಇರೋದು ಮುಂದಿನ ವಿಧಾನಸಭಾ ಚುನಾವಣೆ ಮೇಲೆ. 123 ಕ್ಷೇತ್ರಗಳನ್ನ ಗೆದ್ದು ಅಧಿಕಾರ ಹಿಡಿಯಬೇಕಿದೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ವಿಧಾನ ಪರಿಷತ್ ಕ್ಷೇತ್ರ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ವಿಶ್ವಾಸ ವ್ಯಕ್ತಪಡಿಸಿದ್ದಾರೆ.
- Advertisement -