Political News: ಜೆಡಿಎಸ್ ಭದ್ರಕೋಟೆಯಾಗಿರುವ ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ನಡೆಸಿದ್ದು, ಈಗ ಈ ಸಮಾವೇಶಕ್ಕೆ ಟಕ್ಕರ್ ಕೊಡಲು ಜೆಡಿಎಸ್ ಮತ್ತೊಂದು ಪ್ಲಾನ್ ಮಾಡಿದೆ. ಡಿಸೆಂಬರ್‌ನಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಯವರ ಹುಟ್ಟುಹಬ್ಬ ಬರುತ್ತಿದ್ದು, ಈ ದಿನ ಮಂಡ್ಯದಲ್ಲಿ ಬೃಹತ್ ಸಮಾವೇಶ ಮಾಡಬೇಕು ಎಂದು ಜೆಡಿಎಸ್ ತೀರ್ಮಾನಿಸಿದೆ.
ಡಿಸೆಂಬರ್ 15ರಂದು ಮಂಡ್ಯದ ಸರ್ ಎಂ.ವಿ.ಕ್ರೀಡಾಂಗಣದಲ್ಲಿ ಅಭಿನಂದನಾ ಸಮಾವೇಶ ನಡೆಯಲಿದ್ದು, ಈ ಸಮಾವೇಶದಲ್ಲಿ ಲಕ್ಷಕ್ಕೂ ಅಧಿಕ ಜನರನ್ನು ಒಗ್ಗೂಡಿಸುವ ಗುರಿಯನ್ನು ಜೆಡಿಎಸ್ ನಾಾಯಕರು ಹೊಂದಿದ್ದಾರೆ. ಈ ಮೂಲಕ ಜೆಡಿಎಸ್ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಚೆನ್ನಪಟ್ಟಣ ಸೋಲಿನ ಬೇಸರದಲ್ಲಿರುವ ಜೆಡಿಎಸ್ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸಕ್ಕೆ ಜೆಡಿಎಸ್ ನಿರ್ಧರಿಸಿದೆ.
ನಿನ್ನೆ ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ನಡೆದಿದ್ದು, ಸಾಕಷ್ಟು ಜನ ಭಾಗಿಯಾಗಿದ್ದರು. ಈ ವೇಳೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್, ಜೆಡಿಎಸ್ ವಿರುದ್ಧ, ಹೆಚ್ಡಿಕೆ, ಹೆಚ್ಡಿಡಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಹೀಗಾಗಿ ಈ ಸಮಾವೇಶಕ್ಕೆ ಟಕ್ಕರ್ ಕೊಡಲು ಜೆಡಿಎಸ್ ಪ್ಲಾನ್ ಮಾಡಿದೆ.