Monday, May 5, 2025

Latest Posts

HD Kumarswamy: ಡಿಕೆ ಶಿವಕುಮಾರ್ ಅವರು ಮಂತ್ರಿಯಾಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ ?

- Advertisement -

ಬೆಂಗಳೂರು : 1962ರಿಂದಲೂ ಕಾವೇರಿ ಕೊಳ್ಳದ ರೈತರಿಗಾಗಿ ಹೆಚ್.ಡಿ.ದೇವೇಗೌಡರು ಜೀವವನ್ನೇ ತೇದರು. ಕಾವೇರಿಗಾಗಿ ಹಿಂದಿನ ಪ್ರತೀ ಸರಕಾರವೂ ಕೇಂದ್ರಕ್ಕೆ ಸಡ್ಡು ಹೊಡೆದು ತಮಿಳುನಾಡು ಅಬ್ಬರಕ್ಕೆ ಅಂಕೆ ಹಾಕಿದ್ದವು. ಇಂಥ ಕೆಚ್ಚಿನ ಕರ್ನಾಟಕದ ಇತಿಹಾಸದಲ್ಲೇ ಈ ಸರಕಾರವು, ನೆರೆರಾಜ್ಯ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿದಾಕ್ಷಣ ಬೆದರಿ ಕೈ ಚೆಲ್ಲಿದೆ ಎಂದು ಅವರು ಹೇಳಿದ್ದಾರೆ.

ಸಂಕಷ್ಟ ಸ್ಥಿತಿಯ ಬಗ್ಗೆ ರಾಜ್ಯ ಕಾಂಗ್ರೆಸ್ ಸರಕಾರ ಸುಪ್ರೀಂಕೋರ್ಟ್ ಗೆ ಮನವರಿಕೆ ಮಾಡಿಕೊಡಲಿಲ್ಲ, ಯಾಕೆ? ಕಾನೂನು ತಜ್ಞರ ಜತೆ, ಪ್ರತಿಪಕ್ಷ ಮುಖಂಡರ ಜತೆ ಸಮಾಲೋಚನೆ ನಡೆಸದೇ ವಾಯುವೇಗದಲ್ಲಿ ತಮಿಳುನಾಡಿಗೆ ನೀರು ಹರಿಸಿದ ಒಳಗುಟ್ಟೇನು? ಜನತೆಗೆ ಗೊತ್ತಾಗಬೇಕಿದೆ ಎಂದು ಅವರು ತಿಳಿಸಿದ್ದಾರೆ.

ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿವರ್ಯರು, ತಾವು ಮಂತ್ರಿ ಆಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ? ಅವರು ಸ್ಪಷ್ಟಪಡಿಸಬೇಕಿದೆ. ಕಾವೇರಿ ಕೀಲಿ ಕೇಂದ್ರ ಬಳಿ ಇದೆ ಎಂದಾದರೆ ಇವರ ಹೊಣೆ ಏನು? ಆ ಕೀಲಿ ಈಗ ಸ್ಟಾಲಿನ್ ಅವರ ಕೈಯ್ಯಲ್ಲಿದೆಯೋ ಅಥವಾ ಸೋನಿಯಾ ಗಾಂಧಿ ಅವರ ಕೈಯ್ಯಲ್ಲಿದೆಯೋ? ಎಂದು ಮಾಜಿ ಮುಖ್ಯಮಂತ್ರಿ ಅವರು ಕೇಳಿದ್ದಾರೆ.

- Advertisement -

Latest Posts

Don't Miss