Sunday, September 8, 2024

Latest Posts

ಬೈಕ್‌ನಿಂದ ಆಯತಪ್ಪಿ ಬಿದ್ದು ಹೆಡ್‌ಕಾನ್ಸ್‌ಟೇಬಲ್ ಸಾವು

- Advertisement -

Hassan News: ಹಾಸನ : ಬೈಕ್‌ನಿಂದ ಆಯತಪ್ಪಿ ಬಿದ್ದು ಹೆಡ್‌ಕಾನ್ಸ್‌ಟೇಬಲ್ ಸಾವನ್ನಪ್ಪಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ, ಜೋಡಿಗುಬ್ಬಿ ಕ್ರಾಸ್ ಬಳಿ ಈ ಘಟನೆ ನಡೆದಿದೆ.

ವೆಂಟೇಶ್ (55) ಸಾವನ್ನಪ್ಪಿದ ಹೆಡ್‌ಕಾನ್ಸ್‌ಟೇಬಲ್ ಆಗಿದ್ದು, ಇವರು ಕೊಣನೂರು ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್ಸ್‌ಟೇಬಲ್ ಆಗಿದ್ದರು.  ಸಮನ್ಸ್ ನೀಡಿ ಬೈಕ್‌ನಲ್ಲಿ ಪೊಲೀಸ್ ಠಾಣೆಗೆ ವಾಪಾಸ್ಸಾಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದ್ದು,  ಜೋಡಿಗುಬ್ಬಿ ಕ್ರಾಸ್‌ನಲ್ಲಿ ಹಂಪ್ಸ್ ಕಾಣದೆ ವೆಂಕಟೇಶ್ ಆಯತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಪೇದೇ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ವೆಂಕಟೇಶ್ ಸಾವನ್ನಪ್ಪಿದ್ದಾರೆ. ಅರಕಲಗೂಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಬ್ಯಾಡ್ಮಿಂಟನ್ ತಾರೆ ಸೈನಾ

ಇದ್ರು ,ಹೋದ್ರು ನನಗೆ ಮಂಡ್ಯ ಸಾಕು. ಸ್ವಾರ್ಥ ಅನ್ನೋದು ಇದ್ರೆ ಮಂಡ್ಯ ಮಾತ್ರ: ಸಂಸದೆ ಸುಮಲತಾ ಅಂಬರೀಷ್

ಹಾಸನದಲ್ಲಿ ಹಿಟ್ ಅಂಡ್ ರನ್‌ಗೆ ಮಾವ-ಅಳಿಯ ಬಲಿ

- Advertisement -

Latest Posts

Don't Miss