ಗದಗ: ಅಪ್ರಾಪ್ತ ಶಾಲಾ ವಿದ್ಯಾರ್ಥಿನಿ ಮೇಲೆ ಶಾಲೆಯ ಮುಖ್ಯ ಶಿಕ್ಷಕ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಫೋಕ್ಸೋ ಪ್ರಕರಣ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಿರುವ ಘಟನೆ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ನಡೆದಿದೆ.
ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಗಾದೆ ಇದೆ. ಆದರೆ ಅದೇ ಶಾಲೆಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದರೆ ಹೆಣ್ಣು ಕಲಿಯುವುದಿರಲಿ, ಪೋಷಕರು ಶಾಲೆಗೆ ಕಳುಹಿಸುವುದಕ್ಕೆ ಹೆದರುತ್ತಾರೆ. ಗದಗ ಜಿಲ್ಲೆಯ ನರಗುಂದ ಪಟ್ಟಣದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ಅಲ್ಲಾವುದ್ದಿನ್ ಚವಡಿ ಎಂಬ ಮುಖ್ಯ ಶಿಕ್ಷಕ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಾಲಕಿ ಮನೆಯಲ್ಲಿ ತಾಯಿಗೆ ನಡೆದಿರುವ ವಿಷಯದ ಬಗ್ಗೆ ತಿಳಿಸಿದ್ದಾಳೆ. ಇದರಿಂದ ಮನನೊಂದು ಆಕ್ರೋಶಗೊಂಡ ತಾಯಿ ಮಹಿಳಾ ಸಹಾಯವಾಣಿಗೆ ವಿಷಯ ತಿಳಿಸಿದ್ದಾಳೆ, ನಂತರ ಮಕ್ಕಳಾ ರಕ್ಷಣಾ ಘಟಕದ ಸಿಬ್ಬಂದಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಂತರ ನರಗುಂದ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ವಿದ್ಯಾರ್ಥಿಯ ತಾಯಿ ದೂರು ದಾಖಲಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡ ಪೊಲೀಸರು ಶಾಲೆಯ ಮುಖ್ಯ ಶಿಕ್ಷಕ ಕಾಮುಕ ಅಲ್ಲಾವುದ್ದಿನ್ ಚವಡಿಯನ್ನು ಬಂಧಿಸಿದ್ದಾರೆ.
kolara: ಕಾಂಗ್ರೆಸ್ ಶಾಸಕರ ವಿರುದ್ದ ಕೋಲಾರದಲ್ಲಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ..!
’75 ವರ್ಷ ನಾವು ಚಿಲ್ಲರೆ ಮೇಲೆ ಕಟ್ಟಿದ ಬುನಾದಿ ಮೇಲೆ ಇವರು ನೋಟು ಮಾಡಿದ್ರು’




