Friday, November 22, 2024

Latest Posts

ಭ್ರೂಣ ಹತ್ಯೆ ಪ್ರಕರಣ ಬೆನ್ನಲ್ಲೇ ಮೈಸೂರಿನಲ್ಲಿ ಆರೋಗ್ಯ ಇಲಾಖೆ ಅಲರ್ಟ್!

- Advertisement -

Mysuru News: ಮೈಸೂರು: ರಾಜ್ಯದಲ್ಲಿ ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಹಿನ್ನೆಲೆ ಮೈಸೂರು ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದ್ದು, ಮೈಸೂರು ಜಿಲ್ಲೆಯ ನರ್ಸಿಂಗ್ ಹೋಂ, ಖಾಸಗಿ ಆಸ್ಪತ್ರೆ ಕ್ಲಿನಿಕ್ ಮೇಲೆ ಹದ್ದಿನ ಕಣ್ಣಿಟ್ಟಿದೆ. ಅಕ್ರಮ ತಡೆಗಟ್ಟಲು ಜಿಲ್ಲೆಯಲ್ಲಿ ಟಾಸ್ಕ್ ಪೋರ್ಸ್ ಪಡೆಯನ್ನು ನಿಯೋಜಿಸಲಾಗಿದೆ.

ಮೈಸೂರು ಜಿಲ್ಲಾಧಿಕಾರಿ ಮಾರ್ಗದರ್ಶನದಲ್ಲಿ ಟಾಸ್ಕ್ ಪೋರ್ಸ್ ಕಾರ್ಯನಿರ್ವಹಿಸಲಿದ್ದು ಎರಡು ವರ್ಷದಲ್ಲಿ ಸುಮಾರು 900 ಹೆಣ್ಣು ಭ್ರೂಣಹತ್ಯೆ ಮಾಡಿದ ಗ್ಯಾಂಗನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ರಾಜ್ಯದಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ.
ಸದ್ಯ ಮೈಸೂರು DHO ಬಿ.ಸಿ. ಕುಮಾರಸ್ವಾಮಿ ಸಭೆ ನಡೆಸಿ ಎಲ್ಲಾ ವೈದ್ಯಾಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ. ಆಯುರ್ವೇದ ಸೆಂಟರ್, ಹೋಮಿಯೋಪತಿ ಕ್ಲಿನಿಕ್‌ಗಳ‌ ಮೇಲೂ ನಿಗಾ ಇಡುವಂತೆ ತಿಳಿಸಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಅಕ್ರಮಗಳು ನಡೆಯದಂತೆ ಕಟ್ಟೆಚ್ಚರ ವಹಿಸಲಾಗುತ್ತಿದೆ.

‘ಈ ಬಾರಿ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ’

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ

ಒಂದೇ ಕುಟುಂಬದ ಐದು ಮಂದಿ ಆತ್ಮಹತ್ಯೆ ಪ್ರಕರಣ: ಐವರು ಪೊಲೀಸ್ ವಶಕ್ಕೆ: ಸಚಿವ ಪರಮೇಶ್ವರ್

- Advertisement -

Latest Posts

Don't Miss