ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ, ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಾನ್ಸೂನ್ ವೇಗ ಪಡೆದುಕೊಂಡಿದೆ. ಈಗಾಗಲೇ ಹಲವೆಡೆ ರಣಭಯಂಕರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿಸಿವೆ.
6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜುಲೈ 10ರಿಂದ 15ರವರೆಗೆ ಜಲಾರ್ಭಟ ಹೆಚ್ಚಿರಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 17ರಿಂದ ಜುಲೈ 31ರವರೆಗೆ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ಹೀಗಂತ ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ 10ರಿಂದ 15ವರೆಗೆ ಭಾರೀ ಮಳೆಯಾಗಲಿದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಮುದ್ರದಲ್ಲಿ ದೈತ್ಯಾಕಾರದ ಅಲೆಗಳು ಸೃಷ್ಟಿಯಾಗುವ ಸಾಧ್ಯತೆ ಇದ್ದು, ಮೀನುಗಾರರು ಪರಿಸ್ಥಿತಿ ನೋಡಿಕೊಂಡು ಸಮುದ್ರಕ್ಕಿಳಿಯುವಂತೆ ಎಚ್ಚರಿಕೆ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಇನ್ನು, ಜಿಲ್ಲಾಡಳಿತಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಮಳೆಯ ಪರಿಣಾಮ ಎದುರಿಸಲು ಸಿದ್ಧತೆ ಮಾಡಿಕೊಂಡಿವೆ.
ವೀಕ್ಷಕರೆ, ನಿಮ್ಮ ಜಿಲ್ಲೆಯ ಮಳೆಯ ಅವಾಂತರಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಕಮೆಂಟ್ ತಿಳಿಸಿ.

