Wednesday, February 5, 2025

Latest Posts

ದಕ್ಷಿಣ ಒಳನಾಡಿನಲ್ಲಿ 3 ದಿನಗಳ ಕಾಲ ಭಾರಿ ಮಳೆ..!

- Advertisement -

www.karhnatakatv.net : 3 ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಅಧಿಕ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇನ್ನೂ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ. ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯಪುರ, ಬೀದರ್, ಬೆಳಗಾವಿಯಲ್ಲಿ ಒಣಹವೆ ಇರಲಿದೆ ಎಂದು ಮಾಹಿತಿ ನೀಡಿದ್ದಾರೆ. ಹಾಗೇ ರಾಜ್ಯದಲ್ಲಿ ಮುಂಗಾರು ಮುಕ್ತಾಯವಾಗಿದ್ದು, ಹಿಂಗಾರು ಆರಂಭವಾಗಿದೆ.

ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದ್ದರೂ, ರೈತರಿಗೆ ಮಾತ್ರ ಲಾಭಕ್ಕಿಂತ ಹಾನಿಯೇ ಹೆಚ್ಚಾಗಿದೆ. ಈ ವರ್ಷ ಅಕ್ಟೋಬರ್ 28ರವರೆಗೆ ವಾಡಿಕೆಯ ಪ್ರಕಾರ, 1081 ಮಿ. ಮೀ. ಮಳೆಯಾಗಬೇಕಿತ್ತು. ಆದರೆ, 1158 ಮಿ. ಮೀ. ಮಳೆಯಾಗಿದೆ. ನವೆಂಬರ್ 1 ರಂದು ರಾಜ್ಯದ 12 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

- Advertisement -

Latest Posts

Don't Miss