Sunday, November 16, 2025

Latest Posts

8 ಜಿಲ್ಲೆಗಳಲ್ಲಿ ಭಾರಿ ಮಳೆ – ಯೆಲ್ಲೋ ಅಲರ್ಟ್ ಘೋಷಣೆ!

- Advertisement -

ಕರ್ನಾಟಕದ ಉತ್ತರ ಒಳನಾಡು ಭಾಗದಲ್ಲಿ ಮಳೆ ಚುರುಕುಗೊಂಡಿದೆ. ಮುಂದಿನ ಎರಡು ದಿನಗಳ ಕಾಲ 8 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ವಿಜಯಪುರ ಮತ್ತು ಯಾದಗಿರಿಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದರ ಜೊತೆಗೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ.

ಬೆಂಗಳೂರಿನ HAL ನಲ್ಲಿ ಗರಿಷ್ಠ ಉಷ್ಣಾಂಶ 28.5°C, ಕನಿಷ್ಠ 21.2°C. ನಗರದೊಳಗೆ ಗರಿಷ್ಠ ಉಷ್ಣಾಂಶ 28.0°C, ಕನಿಷ್ಠ ಉಷ್ಣಾಂಶ 21.5°C. ಮಂಗಳೂರು ವಿಮಾನ ನಿಲ್ದಾಣದಲ್ಲಿ ಗರಿಷ್ಠ ಉಷ್ಣಾಂಶ 31.0°C, ಕನಿಷ್ಠ ಉಷ್ಣಾಂಶ 23.2°C. ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 31.0°C, ಕನಿಷ್ಠ ಉಷ್ಣಾಂಶ 25.2°C ಇದೆ.

ಬೆಳಗಾವಿ ಏರ್‌ಪೋರ್ಟ್ ನಲ್ಲಿ ಗರಿಷ್ಠ ಉಷ್ಣಾಂಶ 28.4°C, ಕನಿಷ್ಠ ಉಷ್ಣಾಂಶ 21.2°C. ಬೀದರ್ ಗರಿಷ್ಠ ಉಷ್ಣಾಂಶ 28.0°C, ಕನಿಷ್ಠ 20.8°C. ವಿಜಯಪುರ ಗರಿಷ್ಠ 26.2°C, ಕನಿಷ್ಠ ಉಷ್ಣಾಂಶ 21.9°C
ಧಾರವಾಡದಲ್ಲಿ ಗರಿಷ್ಠ ಉಷ್ಣಾಂಶ 27.6°C, ಕನಿಷ್ಠ 17.0°C ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಜನರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಗಾಳಿಯಿಂದಾಗಿ ಕೆಲವೆಡೆ ಮರಗಳು ಬಿದ್ದು ಹೋಗುವ ಸಾಧ್ಯತೆ ಇದೆ. ವಿದ್ಯುತ್ ವ್ಯತ್ಯಯ, ರಸ್ತೆ ಸಂಚಾರ ಅಡಚಣೆ ಉಂಟಾಗಬಹುದು. ಸಾರ್ವಜನಿಕರು ಅಗತ್ಯವಿದ್ದರೆ ಮಾತ್ರ ಹೊರಬರಬೇಕೆಂಬ ಸೂಚನೆ ನೀಡಲಾಗಿದೆ.

ವರದಿ : ಲಾವಣ್ಯ ಅನಿಗೋಳ

- Advertisement -

Latest Posts

Don't Miss