Dharwad News: ಧಾರವಾಡ: ಹವಾಮಾನ ಇಲಾಖೆಯ ಮೂನ್ಸೂಚನೆಯ ಪ್ರಕಾರ ಜಿಲ್ಲೆಯಲ್ಲಿ ನಾಳೆಯೂ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಮತ್ತು ಜಿಲ್ಲೆಯ ಬಹುತೇಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಿರಂತರವಾಗಿ ಮತ್ತು ವ್ಯಾಪಕವಾಗಿ ಮಳೆ ಆಗುತ್ತಿರುವದರಿಂದ ಶಾಲಾ ಕಾಲೇಜು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಧಾರವಾಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ ಕಾಲೇಜುಗಳಿಗೆ ಇಂದು ಘೋಷಿಸಿರುವ ರಜೆಯನ್ನು ನಾಳೆ ಜೂ.13 ರಂದು ಸಹ ಮುಂದುವರೆಸಿ, ನಾಳೆ ಒಂದು ದಿನದ ರಜೆ ಘೋಷಿಸಿ, ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಇಂದು ಹವಾಮಾನ ಇಲಾಖೆಯಿಂದ ಜಿಲ್ಲೆಗೆ ರೆಡ್ ಅಲರ್ಟ್ ಸೂಚಿಸಲಾಗಿತ್ತು. ಮಳೆಯೂ ನಿರಂತರವಾಗಿ ಆಗುತ್ತಿರುವದರಿಂದ ಅನೇಕ ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿವೆ. ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಸುರಕ್ಷತಾ ದೃಷ್ಠಿಯಿಂದ ನಾಳೆಯೂ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ ಕಾಲೇಜುಗಳಿಗೆ ರಜೆ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.