ಕೆಲ ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ಊರುಗಳೆಲ್ಲಾ ಕೆರೆಯಂತಾಗಿವೆ. ವಿವಿಧ ಭಾಗದಲ್ಲಿ ರಣಭೀಕರ ಮಳೆ ಮುಂದುವರೆಯುತ್ತಲೇ ಇದೆ. ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಕೆರೆಗಳಲ್ಲಿ ನೀರು ಅಪಾಯದ ಮಟ್ಟವನ್ನು ತಲುಪಿವೆ. ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ವಿವಿಧ ಭಾಗದಲ್ಲಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕರ್ನಾಟಕದ ಒಳನಾಡಿನಲ್ಲಿ ನೈಋತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಕರಾವಳಿ ಕರ್ನಾಟಕದಾದ್ಯಂತ ಸಾಮಾನ್ಯವಾಗಿತ್ತು. ಕರಾವಳಿ ಕರ್ನಾಟಕದ ಬಹಳಷ್ಟು ಸ್ಥಳಗಳಲ್ಲಿ ಹಾಗೂ ಕರ್ನಾಟಕದ ಒಳನಾಡಿನ ಹಲವೆಡೆ ಮಳೆ ಅಬ್ಬರಿಸುತ್ತದೆ. ಇಂದು ಸಹ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ನಿಲ್ಲದೆ ಸಂಕಷ್ಟ ಎದುರಾಗಿದೆ. ಭಾಗಮಂಡಲದ ತ್ರಿವೇಣಿ ಸಂಗವು ಒಂದೇ ತಿಂಗಳ ಅವಧಿಯಲ್ಲಿ ಮೂರನೇ ಬಾರಿ ಜಲಾವೃತವಾಗಿದೆ. ಹಲವು ಭಾಗದಲ್ಲಿ ಧಾರಾಕಾರ ಮಳೆಯಿಂದ ಜಲಾವೃತವಾಗಿದೆ.
ಎಲ್ಲೆಲ್ಲಿ ಇಂದು ಧಾರಾಕಾರ ಮಳೆ ಆಗಿದೆ ಎನ್ನುವುದನ್ನ ನೋಡೋದಾದ್ರೆ.
ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಕಾರ ಮಳೆಯಾಗುತ್ತಿದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಯಲ್ಲಿ ಮಳೆರಾಯನ ಅಬ್ಬರ ಜೋರಾಗಿದೆ. ಹೀಗಾಗಿ ರೆಡ್ ಅಲರ್ಟ್ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರಾವಳಿಯ ಮೂರು ಜಿಲ್ಲೆಗಳಲ್ಲೂ ಇಂದು ಧಾರಾಕಾರ ಮಳೆ ಇರಲಿದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಬೆಳಗಾವಿಯಲ್ಲೂ ಧಾರಾಕಾರ ಮಳೆ ಮುಂದುವರಿದಿದೆ. ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ವಿಜಯನಗರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಮಳೆ ಆರ್ಭಟ ಜೋರಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ರಾಮನಗರ, ಬಳ್ಳಾರಿ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲೂ ಮಳೆ ಅಬ್ಬರ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.