ರಾಜ್ಯದಲ್ಲಿ ಇಂದಿನಿOದ 4 ದಿನಗಳವರೆಗೆ ಭಾರಿ ಮಳೆ..!

www.karnatakatv.net: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಇನ್ನು 4 ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅ.30-31ರಂದು ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಕರ್ನಾಟಕಕ್ಕೆ ಅ. 29ರಂದು ಹಿಂಗಾರು ಮಾರುತಗಳು ಪ್ರವೇಶಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇನ್ನೂ 4 ದಿನಗಳವರೆಗೆ ಮಳೆಯಾಗುವ ಸಾಧ್ಯತೆಯಿದ್ದು ಬೆಂಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ದಾವಣಗೆರೆ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ.

ಈಶಾನ್ಯ ಮುಂಗಾರು ಆಗಮನದಿಂದ ಕರ್ನಾಟಕದ ದಕ್ಷಿಣ ಭಾಗದಲ್ಲಿ ಇಂದಿನಿoದ ಅ.31ರವರೆಗೆ ಮಳೆ ಹೆಚ್ಚಾಗಲಿದೆ ಎಂದು ತಿಳಿಸಲಾಗಿದೆ. ರಾಜ್ಯದಲ್ಲಿ ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ರಾಮನಗರ, ಕೋಲಾರ, ಮಂಡ್ಯ, ಮೈಸೂರುಗಳಲ್ಲಿ ಮಳೆ ಹೆಚ್ಚಾಗಲಿ ಎಂದು ತಿಳಿಸಲಾಗಿದೆ.

About The Author