Friday, October 18, 2024

Latest Posts

ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ..!

- Advertisement -

www.karnatakatv.net: ನ.4 ರಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲೂ ಕಾರ್ಮೋಡ, ತಣ್ಣನೆ ಗಾಳಿ, ಕೆಲವೊಮ್ಮೆ ಮಳೆಯಾಗುವ ಸಾಧ್ಯತೆಹಳಿದ್ದು, ರಾಜ್ಯದ ದಕ್ಷಿಣ ಒಳನಾಡು, ಕರಾವಳಿ, ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಅಧಿಕ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಕೆಲವೆಡೆ ಅಧಿಕ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನವೆಂಬರ್ 2 ರಿಂದ 6ರ ತನಕ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದ ಜಿಲ್ಲೆಗಳಲ್ಲಿ ನ.3ರಿಂದ ನ.6 ರವೆರೆಗೆ ಗುಡುಗು ಸಿಡಿಲು ಇರಲಿದೆ ಎಂದು ತಿಳಿಸಲಾಗಿದೆ. ಬಂಗಾಳಕೊಲ್ಲಿಯ ಮಧ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬೆಂಗಳೂರು ನಗರದಲ್ಲಿ ಸಹ ನ.4ರಿಂದ ಎರಡು ದಿನಗಳ ಕಾಲ ಸಾಧಾರಣ ಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

2 ದಿನಗಳವರೆಗೆ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಇನ್ನು ಕೇರಳದ ಐದು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡು, ಕರ್ನಾಟಕ, ಕೇರಳ ಮತ್ತು ಮಾಹೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

- Advertisement -

Latest Posts

Don't Miss