- Advertisement -
ತುಮಕೂರು ಜಿಲ್ಲೆಯಲ್ಲೂ ಧಾರಾಕಾರ ಮಳೆಯಾಗ್ತಿದ್ದು, ಹೆದ್ದಾರಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ತಿಪಟೂರು ಬಳಿಯ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದ್ದು, ಮಳೆ ನೀರಿನಿಂದ ಆವೃತವಾಗಿದೆ. ಮೇಲ್ಸೇತುವೆ ಕೆಳಗಿನ ಅಂಡರ್‌ಪಾಸ್, ರಸ್ತೆಗಳಲ್ಲಿ ನೀರು ನಿಂತಿದ್ದು, ಕೆರೆಯಂತೆ ಭಾಸವಾಗ್ತಿದೆ.
ಅಕ್ಕಪಕ್ಕದ ಜಮೀನುಗಳಿಗೂ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿದೆ. ಹೆದ್ದಾರಿಯಲ್ಲಿ ವಾಹನ ಸಂಚಾರ ಭಾರೀ ಕಷ್ಟವಾಗಿದ್ದು, ಅಕ್ಕಪಕ್ಕದ ಗ್ರಾಮಗಳ ಪ್ರಯಾಣಿಕರು ಪರದಾಡುವಂತಾಗಿದೆ.
- Advertisement -

