ರಾಜ್ಯದಲ್ಲಿ ಮಳೆಯ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿದೆ. ಆದ್ರೆ, ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತದ ಹಿನ್ನಲೆ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಮಳೆ ಆಗುತ್ತಿದೆ. ವಾಯುಭಾರ ಕುಸಿತದ ಪರಿಣಾಮ 7 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಪಶ್ಚಿಮ ಬಂಗಾಳ, ದೆಹಲಿ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಗುಜರಾತ್ನಲ್ಲಿ ಮಹಾಮಳೆಯಾಗುತ್ತಿದ್ದು, ಕರ್ನಾಟಕಕ್ಕೂ ಎಂಟ್ರಿಕೊಡಲಿದೆ.
ಸದ್ಯ ರಾಜ್ಯದಲ್ಲಿ ಮುಂಗಾರು ಮಳೆ ಮಾರುತಗಳು ಚುರುಕಾಗಿದ್ದು, ಮುಂದಿನ 24 ಗಂಟೆ ಗುಡುಗು ಮತ್ತು ಸಿಡಿಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಒಟ್ಟು 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಗೌರಿ ಗಣೇಶ ಹಬ್ಬದಂದು ವರುಣ ಅಬ್ಬರಿಸಲಿದ್ದಾರೆ. ಹೊರಗಡೆ ಹೋಗುವ ಮುನ್ನ ಎಚ್ಚರಿಕೆ ವಹಿಸೋದು ಮುಖ್ಯ.