ರಾಜ್ಯದಲ್ಲಿ ಚುರುಕಾದ ಮಳೆ, ಮುನ್ನೆಚ್ಚರಿಕಾ ಕ್ರಮವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಚಿವ ಕೃಷ್ಣಭೈರೇಗೌಡ

Political News: ಬೆಂಗಳೂರು, ಜುಲೈ 24: ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಜನ-ಜೀವನ ಹಾಗೂ ಆಸ್ತಿ-ಪಾಸ್ತಿ ಹಾನಿಯಾಗದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಸಚಿವರು, “ಜೂನ್ ತಿಂಗಳಲ್ಲಿ ರಾಜ್ಯಕ್ಕೆ ಮಳೆ ಶೇ.56ರಷ್ಟು ಕೊರತೆಯಾಗಿತ್ತು. ಆದರೆ ಜುಲೈ ತಿಂಗಳಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಹೀಗಾಗಿ ಮಳೆ ಕೊರತೆಯ ಪ್ರಮಾಣ ಶೇ.56 ರಿಂದ ಶೇ.14ಕ್ಕೆ … Continue reading ರಾಜ್ಯದಲ್ಲಿ ಚುರುಕಾದ ಮಳೆ, ಮುನ್ನೆಚ್ಚರಿಕಾ ಕ್ರಮವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಚಿವ ಕೃಷ್ಣಭೈರೇಗೌಡ