ಬೆಂಗಳೂರು ನಗರ ಸೇರಿದಂತೆ, ಉತ್ತರ ಕರ್ನಾಟಕದ ಹಲವೆಡೆ ಭರ್ಜರಿ ಮಳೆಯಾಗಿದೆ. ಸೆಪ್ಟೆಂಬರ್ 18, 19ರಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆ ಇದೆ. 13 ಜಿಲ್ಲೆಗಳಿಗೆ ಭಾರಿ ಮಳೆಯ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ , ಉತ್ತರ ಕನ್ನಡ ಹಾಗೂ ಉಡುಪಿ, ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಇಂದು ಭಾರಿ ಮಳೆಯ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಕರಾವಳಿ ಜಿಲ್ಲೆಗಳು, ಬೀದರ್, ಕಲಬುರ್ಗಿ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಮೈಸೂರು, ಮಂಡ್ಯ ಹಾಗೂ ಕೊಡಗು ಜಿಲ್ಲೆಗಳಲ್ಲಿ ನಾಳೆ ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಉಳಿದೆಡೆ ಹಗುರದಿಂದ ಸಾಧಾರಣವಾಗಿ ಮಳೆಯಾಗಲಿದೆ.
ಸೆಪ್ಟೆಂಬರ್ 18 ರಂದು 22.83 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ. ತಾಪಮಾನ 22.2°C ಗೆ ಇಳಿಯುತ್ತದೆ. ಸೆಪ್ಟೆಂಬರ್ 19 ರಂದು ಸಾಧಾರಣ ಮಳೆಯಾಗುತ್ತದೆ. ಸೆಪ್ಟೆಂಬರ್ 20 ರಂದು ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್ 21-22 ರ ವಾರಾಂತ್ಯದಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ಅಲ್ಲಲ್ಲಿ ತುಂತುರು ಮಳೆಯಾಗಬಹುದು. ಶುಕ್ರವಾರದಂದು ಹೊರಗಡೆ ಚಟುವಟಿಕೆಗಳಿಗೆ ಅನುಕೂಲಕರವಾಗಿದೆ.

